ವಿಜಯವಾಣಿ ಸುದ್ದಿಜಾಲ ಕಲಬುರಗಿ
ಇಲ್ಲಿರುವ ಶಿಕ್ಷಣ ಇಲಾಖೆಯ ಆಯುಕ್ತಾಲಯದ ಹೆಚ್ಚುವರಿ ಆಯುಕ್ತರಾಗಿ ಐಎಎಸ್ ಅಧಿಕಾರಿ ಡಾ.ಆಕಾಶ ಶಂಕರ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಇದುವರೆಗೂ ಆನಂದ ಪ್ರಕಾಶ ಮೀನಾ ಪ್ರಭಾರಿಯಾಗಿದ್ದರು.
ಡಾ.ಆಕಾಶ ೨೦೧೯ನೇ ಸಾಲಿನ ಐಎಎಸ್ ಅಧಿಕಾರಿಯಾಗಿದ್ದಾರೆ. ಎರಡು ದಿನಗಳಲ್ಲಿ ಅವರು ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.