ಬೀದರ್: ಭಾಲ್ಕಿ ತಾಲ್ಲೂಕಿನ ಹಲಬರ್ಗಾ ಗ್ರಾಮದ ಡಾ. ಪ್ರಭಾ ನಂಜುಂಡಯ್ಯ ಸ್ವಾಮಿ ಅವರಿಗೆ ರಾಷ್ಟ್ರೀಯ ಬಸವ ಪ್ರತಿಷ್ಠಾನದ ವತಿಯಿಂದ ಕೊಡಲಾಗುವ ಕಾಯಕ ರತ್ನ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಶುಭ್ರ ಆರೋಗ್ಯಧಾಮದ ವ್ಯವಸ್ಥಾಪಕ ನಿರ್ದೇಶಕರಾಗಿರುವ ಪತಿ ಡಾ. ನಂಜುಂಡಯ್ಯ ಸ್ವಾಮಿ ಅವರೊಂದಿಗೆ ಬೆಂಗಳೂರಿನಲ್ಲಿ ನೆಲೆಸಿರುವ ಡಾ. ಪ್ರಭಾ, ಒಂದು ದಶಕದಿಂದ ವೈದ್ಯ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಕಾಯಕ ನಿಷ್ಠೆಗೆ ಪ್ರಶಸ್ತಿ ಸಂದಿದೆ.