ಕೊಪ್ಪಳದಲ್ಲಿ ಜಿಲ್ಲಾಡಳಿತದಿಂದ ಬಾಬು ಜಗಜೀವನರಾಂ ಜಯಂತಿ ಆಚರಿಸಲಾಯಿತು. 
ಜಿಲ್ಲೆ

ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂಮ್‌ಗೆ ನಮನ

ಕೊಪ್ಪಳ: ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂಮ್ ಜಯಂತಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಜಗಜೀವನರಾಂ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಿದಾನಂದ, ಪಶು ಇಲಾಖೆ ಉಪನಿರ್ದೇಶಕ ಡಾ.ನಾಗರಾಜ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಿ.ಎಂ.ದೊಡ್ಡಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಇತರರಿದ್ದರು.

ಪುತ್ಥಳಿಗೆ ಮಾಲಾರ್ಪಣೆ

ನಗರದ ಹೊಸಪೇಟೆ ರಸ್ತೆಯ ನಿಜಗುಣ ಅಂಬಿಗರ ಚೌಡಯ್ಯ ಉದ್ಯಾನದಲ್ಲಿ ಬಾಬು ಜಗಜೀವನರಾಂ ಪುತ್ಥಳಿಗೆ ಡಿಸಿ ಎಂ.ಸುಂದರೇಶ ಬಾಬು, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಎಸ್ಪಿ ಯಶೋದಾ ವಂಟಗೋಡಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಗರಸಭೆ ಪೌರಾಯುಕ್ತ ಎಚ್.ಎನ್.ಭಜಕ್ಕನವರ್ ಇತರರಿದ್ದರು.