ಜಿಲ್ಲೆ

ಡಾ.ರೇಣುಪ್ರಸಾದ್ ನೂತನ ಡಿಎಚ್‌ಒ

Chitradurga - Desk - Pranav Kumar

ಚಿತ್ರದುರ್ಗ: ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಅವರನ್ನು ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.

ದಾವಣಗೆರೆ ಆರನಕಲ್ಲು ಗ್ರಾಮ ಮೂಲದ ಅವರು ಚಿತ್ರದುರ್ಗ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಹಲವು ವರ್ಷ ಜಿಲ್ಲಾ ಸರ್ವೇಕ್ಷಣಾಧಿಕಾರಿಯಾಗಿದ್ದರು. ಜಿಲ್ಲಾಸ್ಪತ್ರೆಯ ಇಎನ್‌ಟಿ ತಜ್ಞ ಡಾ.ರವೀಂದ್ರ ಅವರು ಜಿಲ್ಲಾ ಶಸ್ತ್ರಚಿಕಿತ್ಸಕರಾಗಿ ಭಾನುವಾರ ಅಧಿಕಾರ ವಹಿಸಿಕೊಂಡರು.