ಜಿಲ್ಲೆ

ಡಿ.21ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಚಾಮರಾಜನಗರ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಚಾಮರಾಜನಗರ, ಹರದನಹಳ್ಳಿ ಹಾಗೂ ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ಡಿ.21ರಂದು ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಗಾಳಿಪುರ, ಮೆಡಿಕಲ್ ಕಾಲೇಜು, ಮೂಡಲಪುರ, ಮೂಡಲಪುರ ಸಣ್ಣ ಕೈಗಾರಿಕಾ ಇಲಾಖೆ, ಸಿದ್ದಯ್ಯನಪುರ, ಹೊಂಗಲವಾಡಿ, ಕೋಳಿಪಾಳ್ಯ, ಬಂಧಿಗೌಡನಹಳ್ಳಿ, ಅಟ್ಟುಗೂಳಿಪುರ, ಕೊತ್ತಲವಾಡಿ, ಅರಕಲವಾಡಿ, ಯರಗನಹಳ್ಳಿ, ಸುವರ್ಣನಗರ, ಫ್ಯಾಕ್ಟರಿ, ಸಲವಾಡಿ, ಪುಣಜನೂರು, ಡೊಳ್ಳಿಪುರ, ಚನ್ನಪನಪುರ, ಅಮಚವಾಡಿ, ಮಾದಲವಾಡಿ, ಕಿಲಗೆರೆ, ಮಾದಲವಾಡಿ, ಯನಗುಂಬ, ಯರಗನಹಳ್ಳಿ, ಅಚ್ಚಟ್ಟಿಪುರ, ಯಾನಗಳ್ಳಿ ಮತ್ತು ಹೊನ್ನೂರು, ಕುದೇರು, ಉಮ್ಮತ್ತೂರು, ಸಂತೇಮರಹಳ್ಳಿ, ಕೆಂಪನಪುರ, ನವಿಲೂರು, ದುಗ್ಗಟ್ಟಿ, ಆಲ್ದೂರು, ಅಂಬಳೆ, ಮಂಗಲ ವಾಟರ್ ಸಪ್ಲೈ ಚುಂಗಡಿಪುರ, ಅವಿತ್ ಗ್ರೀನ್ ಸೋಲಾರ್, ಮೂಡಲ ಅಗ್ರಹಾರ ಹಾಗೂ ಸುತ ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸಬೇಕು ಎಂದು ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.