ಬಾಗಲಕೋಟೆ: ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಬೀಳಗಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಡಿಸೆಂಬರ್ 26 ರಂದು ಗದ್ದನಕೇರಿ ಕ್ರಾಸ್ ಹತ್ತಿರವಿರುವ ಲಡ್ಡು ಮುತ್ಯಾ ದೇವಸ್ಥಾನ ಸಭಾಂಗಣದಲ್ಲಿ ಜನತಾ ದರ್ಶನ ನಡೆಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸಂಜೆ ಜರುಗಿದ ಡಿಸೆಂಬರ್ ಮಾಹೆ ಜನತಾ ದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಡಿ 26 ರಂದು ಜರುಗುವ ಜನತಾ ದರ್ಶನದಲ್ಲಿ ಜಮಖಂಡಿ ಹಾಗೂ ಬಾಗಲಕೋಟೆ ಉಪವಿಭಾಗಾಧಿಕಾರಿಗಳು, ಬೀಳಗಿ, ಬಾಗಲಕೋಟೆ,ಬಾದಾಮಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು, ಸಾರ್ವಜನಿಕರಿಂದ ಸ್ವೀಕೃತವಾಗುವ ಅಹವಾಲು, ದೂರು ಮತ್ತು ಮನವಿಗಳನ್ನು ಸ್ಥಳದಲ್ಲಿಯೇ ಇತ್ಯರ್ಥ ಪಡಿಸಲು ಕ್ರಮವಹಿಸಬೇಕು ಎಂದರು.
ಕಾರ್ಯಕ್ರಮಮಕ್ಕಾಗಿ ವೇಧಿಕೆ ನಿರ್ಮಾಣ, ಬ್ಯಾನರ್ ಅಳವಡಿಕೆ, ವಿವಿಧ ಇಲಾಖೆಗಳ ಮಳಿಗೆ ಸ್ಥಾಪನೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ಎಲ್ಲೂ ಲೋಪದೋಷಗಳಾಗದಂತೆ ಅಗತ್ಯ ಸಿದ್ದತೆಗಳನ್ನು ಈಗಿನಿಂದಲೇ ಮಾಡಿಕೊಂಡು, ಶಿಷ್ಟಾಚಾರದಂತೆ ಸಚಿವರು ಮತ್ತು ಶಾಸಕರಿಗೆ ಆಮಂತ್ರಣ ಪತ್ರಿಕೆ ನೀಡುವ ಕಾರ್ಯವಾಗಬೇಕು ಎಂದು ಹೇಳಿದರು.
ರ್ವಜನಿಕರು ಹೆಚ್ಚಿನ ಸಂಖೆಯಲ್ಲಿ ಸೇರುವದರಿಂದ ಆರೋಗ್ಯ ಇಲಾಖೆ ಅಧಿಕಾರಿ ವಯೋವೃದ್ದರಿಗೆ, ಗರ್ಭೀಣಿ ಮಹಿಳೆಯರಿಗೆ ಮಾಸ್ಕ ವಿತರಿಸಲು ಕ್ರಮ ಕೈಗೊಳ್ಳಬೇಕು. ಮುಂಜಾಗೃತೆಗಾಗಿ ಅಗತ್ಯ ವೈದ್ಯಾಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸತಕ್ಕದ್ದು ಎಂದು ಸೂಚಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.