ಚಾಮರಾಜನಗರ: ಫೆಂಗಲ್ ಚಂಡಮಾರುತದ ಪರಿಣಾಮ ಚಾಮರಾಜನಗರ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮಳೆ ಮುಂದುವರೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಡಿ.3ರ ಮಂಗಳವಾರವು ಸಹ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.
ಪರೀಕ್ಷೆ ನಡೆಯುತ್ತಿರುವ ಪದವಿ ಕಾಲೇಜುಗಳಿಗೆ ಹೊರತುಪಡಿಸಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದ್ದಾರೆ.