ಚಿತ್ರದುರ್ಗ: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ಡಿ.7ಮತ್ತು 8 ರಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಹುದ್ದೆಗಳಿಗೆ ನೇ ಮಕಕ್ಕೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು. ಡಿಸಿ ಕಚೇರಿಯಲ್ಲಿ ಕಚೇರಿಯಲ್ಲಿ ಪರೀಕ್ಷೆ ಪೂ ರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು,ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ತಪಾಸಣೆಗೆ ಅನುಕೂಲವಾಗುವಂತೆ ಹೆ ಚ್ಚುವರಿ ಪೊಲೀಸರನ್ನು ನೇಮಿಸ ಬೇಕೆಂದು ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.
ಯಾವುದೇ ಗೊಂದಲ,ಅಕ್ರಮಗಳಿಗೆ ಎಡೆಯಾಗದಂತೆ ಪರೀಕ್ಷೆ ನಡೆಸಬೇಕು. ಕೆಪಿಎಸ್‌ಸಿ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸ ಬೇ ಕೆಂದು ತಾಕೀತು ಮಾಡಿದರು. ಮೊಬೈಲ್,ಬ್ಲೂಟೂತ್ ಮತ್ತಿತರ ಆಧುನಿಕ ಸಂವಹನದ ಉಪಕರಣಗಳನ್ನು ಬಳಕೆ ಆಗದಂತೆ ಅಭ್ಯರ್ಥಿಗ ಳನ್ನು ಸಂಪೂರ್ಣವಾಗಿ ತಪಾಸಣೆ ನಡೆಸಬೇಕು.
ತಪಾಸಣೆಗೆ ತನ್ನ ಸಿಬ್ಬಂದಿಯನ್ನು ನಿಯೋಜಿಸುವುದಾಗಿ ಕೆಪಿಎಸ್‌ಸಿ ತಿಳಿಸಿದೆ. ಆದಾಗ್ಯೂ ಎಲ್ಲ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ತ ಪಾಸಣೆಗಾಗಿ ಪ್ರತ್ಯೇಕ ತಂಡ ರಚಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಿಗೂ ಮಹಿಳಾ ಅಭ್ಯರ್ಥಿಗಳ ತಪಾಸಣೆಗೆ ಅನುಕೂಲವಾಗುವಂತೆ ಹೆ ಚ್ಚುವರಿ ಮಹಿಳಾ ಪೊಲೀಸರನ್ನೂ ತಪ್ಪದೇ ನೇಮಿಸಬೇಕು. ಅಕ್ರಮ ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್,ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆಗೆ ಸೂಚಿಸಲಾಗಿದೆ. ಜಾಮರ್,ಕ್ಯಾಮೆರಾಗಳನ್ನು ಪರಿಶೀಲಿಸಿ ಅವುಗಳ ಸುಸ್ಥಿತಿಯಲ್ಲಿವೆಯೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್‌ನೊಂದಿಗೆ, 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗುವುದು. ಖಜಾನೆ ಅಧಿಕಾರಿ,ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಕೊಠಡಿ ಮೇಲ್ವಿಚಾರಕರು ಪ್ರಶ್ನೆಪತ್ರಿಕೆ,ಓಎಂಆರ್ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಸಿಬ್ಬಂದಿ ನೇಮಿಸಬೇಕು. ಉತ್ತರ ಪತ್ರಿಕೆಗಳ ಬಂಡಲ್ ಗಳನ್ನು ಅಂಚೆ ಕಚೇರಿ ಮೂಲಕ ಆಯೋಗಕ್ಕೆ ಸುರಕ್ಷಿತವಾಗಿ ತಲುಪಿಸಬೇಕೆಂದರು.
40 ಪರೀಕ್ಷಾ ಕೇಂದ್ರಗಳು
ಚಿತ್ರದುರ್ಗ ಹಾಗೂ ಚಳ್ಳಕೆರೆಯ 40 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು,14614 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಡಿಡಿಪಿಐ ಎಂ.ಆರ್.ಮಂಜುನಾಥ್ ಹೇಳಿದರು. 7ರಂದು ಮಧ್ಯಾಹ್ನ 2ರಿಂದ 4 ಗಂಟೆ ರವರೆಗೆ ಕನ್ನಡ ಭಾಷೆ ಪರೀಕ್ಷೆ ನಡೆಯ ಲಿದೆ. 8ರಂದು ಬೆಳಗ್ಗೆ 10ರಿಂದ 11.30ವರೆಗೆ ಸಾಮಾನ್ಯ ಜ್ಞಾನ ಹಾಗೂ ಮಧ್ಯಾಹ್ನ 2ರಿಂದ 4 ಗಂಟೆ ರವರೆಗೆ ಸಾಮಾನ್ಯ ಕನ್ನಡ, ಸಾಮಾ ನ್ಯ ಇಂಗ್ಲಿಷ್,ಕಂಪ್ಯೂಟರ್ ಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದರು. ಚಳ್ಳಕೆರೆ ತಹಸೀಲ್ದಾರ್ ರೆಹಮಾನ್‌ಪಾಷ, ಡಿವೈಎಸ್‌ಪಿ ಪಿ.ಕೆ.ದಿನಕರ್ ಮತ್ತಿತರ ಅಧಿಕಾರಿಗಳಿದ್ದರು.
----