ಬಾಗಲಕೋಟೆ ನಗರದಲ್ಲಿ ಡಿ.ದೇವರಾಜ ಅರಸು ಮೆರವಣಿಗೆ. 
ಜಿಲ್ಲೆ

ಡಿ.ದೇವರಾಜ ಅರಸು ಭಾವಚಿತ್ರ ಮೆರವಣಿಗೆ

ಬಾಗಲಕೋಟೆ: ಡಿ.ದೇವರಾಜ ಅರಸು ಅವರ ೧೦೯ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿ ದೇವರಾಜ ಅರಸು ಅವರ ಭಾವಚಿತ್ರಕ್ಕೆ ಸಂಸದ ಪಿ.ಸಿ.ಗದ್ದಿಗೌಡರ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆ ಚಾಲನೆ ನೀಡಿದರು.
ಮೆರವಣಿಗೆ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ನಗರದ ನಾನಾ ಕಡೆ ಸಂಚರಿಸಿ ಕಲಾಭವನಕ್ಕೆ ಮುಕ್ತಾಯಗೊಂಡಿತು. ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಿದ್ದವು.