ಹಾಸನ: ಮಾಜಿ ಮುಖ್ಯ ಮಂತ್ರಿ ದಿ. ಡಿ.ದೇವರಾಜು ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಣೆ ಮಾಡುವ ನಿಟ್ಟಿನಲ್ಲಿ ಪೂರ್ವ ಸಿದ್ದತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿ.ದೇವರಾಜು ಅರಸು ಅವರ ಜಯಂತಿ ಅಂಗವಾಗಿ ಮಂಗಳವಾರ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸಾಮಾಜಿಕ ಹರಿಕಾರರಾದ ಡಿ.ದೇವರಾಜ್ ಅರಸು ಅವರ ಜಯಂತಿ ಕಳೆಗಟ್ಟುವಂತೆ ಕಾರ್ಯಕ್ರಮ ಆಯೋಜನೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಆ.20 ರಂದು ನಗರದ ಡಾ:ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ,ಬೆಳಿಗ್ಗೆ 9.30 ಕ್ಕೆ ಮೆರವಣಿಗೆಯು ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಹೊರಡಲಿದೆ. ಕಾರ್ಯಕ್ರಮಕ್ಕೆ ಉತ್ತಮ ಉಪನ್ಯಾಸ ನೀಡುವವರನ್ನು ಆಹ್ವಾನಿಸಿ ಎಂದು ತಿಳಿಸಿದರಲ್ಲದೆ, ಕಾರ್ಯಕ್ರಮದ ಗಂಭೀರತೆ ಇರಲಿ ಎಂದರು.
ಎಲ್ಲಾ ಮಹನೀಯರು ದೇಶದ ಆಸ್ತಿ ಅವರುಗಳು ಮಾಡಿರುವ ಕ್ರಾಂತಿಕಾರಕ ಬದಲಾವಣೆ ಹಾಗೂ ಅವರ ವಿಚಾರಧಾರೆಗಳನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ಎಲ್ಲಾ ವರ್ಗದವರು ಜಯಂತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಹಾಜರಿದ್ದ ಸಂಘಟನೆಯ ಮುಖಂಡರುಗಳು ಹಿಂದುಳಿದ ವರ್ಗಗಳ ವಸತಿ ಶಾಲೆಗೆ 5 ಎಕರೆ ಜಮೀನು ಒದಗಿಸಲು ಹಾಗೂ ಆಲೂರಿನಲ್ಲಿ ದೇವರಾಜು ಅರಸು ಅವರ ಭವನ ನಿರ್ಮಾಣಕ್ಕೆ ಜಾಗ ನೀಡುವಂತೆ ಮನವಿ ಮಾಡಿದರು. ಸ್ಥಳ ಗುರುತಿಸುವಂತೆ ಜಿಲ್ಲಾಧಿಕಾರಿಯವರು ತಿಳಿಸಿದರು.
ನಗರದಲ್ಲಿ ದೇವರಾಜು ಅರಸು ಅವರ ಪ್ರತಿಮೆ ಸ್ಥಾಪನೆಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ನಗರದಲ್ಲಿ ಯಾವುದಾದರು ವೃತ್ತಕ್ಕೆ ದೇವರಾಜ್ ಅರಸು ಅವರ ಹೆಸರನ್ನಿಡಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾ ಅಧಿಕಾರಿ ಹಾಗೂ ಸಂಘಟನೆಯಾ ಪದಾಧಿಕಾರಿಗಳು