ಜಾಗರ ಹೋಬಳಿ ಕಸಾಪ ಅಧ್ಯಕ್ಷ ವಾಸು ಪೂಜಾರಿ 
ಜಿಲ್ಲೆ

ಡಿ. ೧೬ರಂದು ಕನ್ನಡ ರಾಜ್ಯೋತ್ಸವ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ ಜಾಗರ ಹೋಬಳಿ ಘಟಕದ ವತಿಯಿಂದ ಡಿ.೧೬ ರಂದು ಸೋಮವಾರ ೬೯ನೇ ಕನ್ನಡ ರಾಜ್ಯೋತ್ಸವವನ್ನು ಆಯೋಜಿಸಲಾಗಿದೆ ಎಂದು ಜಾಗರ ಹೋಬಳಿ ಕಸಾಪ ಅಧ್ಯಕ್ಷ ವಾಸು ಪೂಜಾರಿ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ. ೧೬ರಂದು ಬೆಳಗ್ಗೆ ೧೧ ಗಂಟೆಗೆ ಶಿರವಾಸೆ ಶ್ರೀ ಗಜಾನನ ಮಂದಿರದಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವವನ್ನು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಲಿದ್ದಾರೆ ಎಂದರು.

ರಾಷ್ಟç ಧ್ವಜಾರೋಹಣವನ್ನು ಕಸಾಪ ಹೋಬಳಿ ಸ್ಥಾಪಕ ಅಧ್ಯಕ್ಷ ಕೆ.ಆರ್. ಚಂದ್ರೇಗೌಡ ಹಾಗೂ ಗೌರವ ಕಾರ್ಯದರ್ಶಿ ಎಸ್.ಎಂ. ದೇವಣ್ಣಗೌಡ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್ ಮೂರ್ತಿ, ತಾಲೂಕು ಕಸಾಪ ಅಧ್ಯಕ್ಷ ಬಿಸಿಲೇಹಳ್ಳಿ ಸೋಮಶೇಖರ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಅಂದು ಬೆಳಗ್ಗೆ ೯.೩೦ ಕ್ಕೆ ಗಾಳಿಗುಡ್ಡೆಯಲ್ಲಿ ಪ್ರತಿಷ್ಠಾಪಿಸಿರುವ ಡಾ. ಪುನೀತ್ ರಾಜ್‌ಕುಮಾರ್ ಪುತ್ಥಳಿ ಅನಾವರಣವನ್ನು ಗಂಗೇಖಾನ್ ಕೆಳಚಂದ್ರ ಗ್ರೂಪ್ ಕಾಫಿ ಎಸ್ಟೇಟ್‌ನ ಪ್ರಧಾನ ವ್ಯವಸ್ಥಾಪಕ ಸೋಮಶೇಖರ್ ನೆರವೇರಿಸಲಿದ್ದಾರೆ. ಅಂದು ಬೆಳಗ್ಗೆ ವೈಭವದ ಜಾನಪದ ಕಲಾ ತಂಡಗಳೊAದಿಗೆ ಮೆರವಣಿಗೆ ನಡೆಸಲಾಗುವುದು ಎಂದರು.

ದೇವಮ್ಮ ಬಸವೇಗೌಡ ದತ್ತಿ ಉಪನ್ಯಾಸವನ್ನು ಕಸಾಪ ಮುಖಂಡ ಎಸ್.ಎಸ್.ವೆಂಕಟೇಶ್ ನಡೆಸಿಕೊಡಲಿದ್ದಾರೆ. ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾಂಸ್ಕೃತಿಕ ವೈಭವ, ಸ್ಥಳೀಯ ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ಹಾಗೂ ಸ್ಥಳೀಯ ಗಾಯಕರಿಗಾಗಿ ನಾಡಗೀತೆ, ಭಾವಗೀತೆ, ಜನಪದ ಗೀತೆಗಳ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ, ಉದಯೋನ್ಮುಖ ಕವಿಗಳಿಂದ ಕವಿಗೋಷ್ಠಿ, ಕನ್ನಡ ಜಾಗೃತಿ ಜಾಥಾ, ಭುವನೇಶ್ವರಿ ಭಾವಚಿತ್ರದ ಮೆರವಣಿಗೆ, ಕಸ್ತೂರಿ ರಂಗನ್ ವರದಿ ವಿರೋಧಿ ಜನಜಾಗೃತಿ ಜಾಥಾ, ಸನ್ಮಾನ, ಬೀಳ್ಕೊಡುಗೆ ಸಮಾರಂಭವನ್ನು ಇದೇ ಸಂದರ್ಭದಲ್ಲಿ ನಡೆಸಲಾಗುವುದೆಂದು ತಿಳಿಸಿದರು.

ಅದೇ ದಿನ ಸಂಜೆ ೪ ಗಂಟೆಗೆ ಸಾಂಸ್ಕೃತಿಕ ಸ್ಪರ್ಧೆಗಳು, ಸಹ್ಯಾದ್ರಿ ಅಂಧಮಕ್ಕಳಿAದ ರಸಮಂಜರಿ ಕನ್ನಡ ಗೀತೆ ಗಾಯನ, ಸ್ಥಳೀಯ ಕಲಾವಿದರಿಂದ ಜಾನಪದ ನೃತ್ಯ, ಅಂಟಿಗೆ-ಪಿAಟಿಗೆ, ನಟರಾಜ ವಾರಿಯರ್ಸ್ ನಾಟ್ಯಸಂಘ ಬಿಳುಗೊಳ ಇವರಿಂದ ನೃತ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.