ಬಾಗಲಕೋಟೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಗಾಣಿಗ ಸಮಾಜ ಗುರು ಕಲ್ಲಿನಾಥ ಶ್ರೀಗಳು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದ ರಾಜ್ಯಾಧ್ಯಕ್ಷ ಆನಂದ ಕೆ. ಮಂಡ್ಯ, ನಂದು ಗಡಗಿ, ಬಸವರಾಜ ಮಡ್ಡಿ ಇತರರು ಇದ್ದರು. 
ಜಿಲ್ಲೆ

ಡಿ.೧೮ ರಂದು ಸುವರ್ಣ ಸೌಧ ಚಲೋ

ಬಾಗಲಕೋಟೆ: ಗಾಣಿಗ ಸಮಾಜದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಗಾಣಿಗ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಬೇಕು ಎಂದು ಆಗ್ರಹಿಸಿ ಡಿ.೧೮ ರಂದು ಬೆಳಗಾವಿ ಸುವರ್ಣ ಸೌಧ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಗಾಣಿಗ ಸಮಾಜ ಗುರು ಕಲ್ಲಿನಾಥ ಶ್ರೀಗಳು ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಹಿಂದಿನ ಸರ್ಕಾರದಲ್ಲಿ ಗಾಣಿಗ ಸಮಾಜದ ನಿಗಮ ಸ್ಥಾಪಿಸಿದ್ದು, ಅದಕ್ಕೆ ಇಲ್ಲಿಯ ವರೆಗೆ ಅಽಕೃತ ಕಚೇರಿ, ಅನುಷ್ಠಾನ ಹಾಗೂ ಅನುದಾನ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ ೮೫ ಲಕ್ಷ ಜನರು ಗಾಣಿಗ ಸಮಾಜದವರು ಇದ್ದು ಸರ್ಕಾರ ಸಮಾಜವನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದರು.

ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದ ರಾಜ್ಯಾಧ್ಯಕ್ಷ ಆನಂದ ಕೆ. ಮಂಡ್ಯ ಮಾತನಾಡಿ, ಡಿ.೧೮ ರಂದು ಬೆಳಗ್ಗೆ ೧೦.೩೦ ಗಂಟೆಗೆ ಬೆಳ ಗಾವಿಯ ಸುವರ್ಣ ಸೌಧದ ಮುಂದೆ ಶಾಂತಿಯುತವಾಗಿ ಹೋರಾಟ ಮಾಡುತ್ತೇವೆ. ಸಮಾಜವು ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದ್ದು, ಹಲವು ವರ್ಷಗಳಿಂದ ತಮ್ಮ ಕುಲಕಸುಬನ್ನು ಕಳೆದುಕೊಂಡು ಜೀವನ ಸಾಗಿಸುತ್ತಿದ್ದಾರೆ. ೨೦೨೩ ಫೆಬ್ರು ವರಿ ೧೩ ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಹೋರಾಟ ನಡೆಸಿದಾಗ ಹಿಂದಿನ ಬಿಜೆಪಿ ಸರ್ಕಾರ ನಮ್ಮ ಹೋರಾಟಕ್ಕೆ ಮನ್ನಣೆ ನೀಡಿ ನಿಗಮ ಮಂಡಳಿಯನ್ನು ಘೋಷಣೆ ಮಾಡಿದ್ದರು. ಆದರೇ ಇದು ವರೆಗೂ ಅನುದಾನ ಬಿಡುಗಡೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.