ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಬುಧವಾರ ಈ ಕುರಿತು ಜರುಗಿದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಮಾತನಾಡಿದರು. 
ಜಿಲ್ಲೆ

ಡಿ.೨೮ ರಿಂದ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ

ಬಾಗಲಕೋಟೆ: ಪ್ರಸಕ್ತ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ಅಽಕಾರಿ ಹಾಗೂ ಸಿಬ್ಬಂದಿಗಳಿಗೆ ಡಿ.೨೮ ರಿಂದ ೩೦ ವರೆಗೆ ಮೂರು ದಿನಗಳ ಕಾಲ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಆರೋಗ್ಯ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಬುಧವಾರ ಈ ಕುರಿತು ಜರುಗಿದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ, ಕ್ರೀಡಾಕೂಟದ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ಎಲ್ಲ ವೃಂದ ಸಂಘಗಳು, ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಕ್ರೀಡಾಕೂಟಗಳನ್ನು ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲು ತಿರ್ಮಾನಿಸಲಾಗಿದೆ ಎಂದು ತಿಳಿಸಿದರು.

ಕ್ರೀಡಾಕೂಟಗಳನ್ನು ಅಚ್ಚುಕಟ್ಟಾಗಿ ನಡೆಸಲು ವಿವಿಧ ಸಮಿತಿಗಳಾದ ಮೇಲುಸ್ತುವಾರಿ ಸಮಿತಿ, ಪ್ರಚಾರ ಸಮಿತಿ, ವೇದಿಕೆ ಸಮಿತಿ, ಆಹಾರ, ವಸತಿ, ಹೊರಾಂಗಣ ಮತ್ತು ಒಳಾಂಗಣ ಕ್ರೀಡಾ ಸಮೀತಿ, ಸಾಂಸ್ಕೃತಿಕ ಸಮಿತಿ, ಆರೋಗ್ಯ ಸಮಿತಿ, ಆತಿಥ್ಯ ಹಾಗೂ ಹಣಕಾಸು ಸಮಿತಿ ರಚಿಸಲಾಗಿದೆ. ಸಮಿತಿಯಲ್ಲಿ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ಮಾಡಿದಲ್ಲಿ ಕಾರ್ಯಕ್ರಮ ಯಶಸ್ವಿಯಾಗಲಿದೆ. ಆದ್ದರಿಂದ ತಮ್ಮ ತಮ್ಮ ಜವಾಬ್ದಾರಿಗಳನ್ನು ಅರಿತು ಕೆಲಸ ಮಾಡುವಂತೆ ಹೇಳಿದರು.

ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರತಿಯೊಬ್ಬರು ಭಾಗವಹಿಸಬೇಕು. ಅಂದಾಗ ಮಾತ್ರ ಇಂತಹ ಕಾರ್ಯಕ್ರಮ ಆಯೋಜನೆ ಮಾಡಿದಕ್ಕೆ ಸಾರ್ಥಕತೆ ಬರುತ್ತದೆ. ಪೊಲೀಸ್ ಕ್ರೀಡಾಕೂಟ, ಕಂದಾಯ ಇಲಾಖೆ ಕ್ರೀಡಾಕೂಟ ಹಾಗೂ ಸರ್ಕಾರಿ ನೌಕರರ ಕ್ರೀಡಾಕೂಟಗಳು ನಡೆದಿರುವುದನ್ನು ನೋಡಿದ್ದೇವೆ. ಆದರೆ ಪಂಚಾಯಿತಿ ರಾಜ್ ಇಲಾಖೆಯಿಂದ ಉತ್ತಮ ಹಾಗೂ ಅಚ್ಚುಕಟ್ಟಾಗಿ ಕ್ರೀಡಾಕೂಟಗಳನ್ನು ನಡೆಸಲಾಗುತ್ತಿರುವುದು ಹೆಮ್ಮೆಯ ವಿಷಯ. ಎಲ್ಲ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಇದ್ದು, ಪ್ರತಿಯೊಬ್ಬರು ಭಾಗವಹಿಸಲು ಮುಂದೆ ಬರಬೇಕಿದೆ ಎಂದರು.

ಭಾಗವಹಿಸಿದ ಕ್ರೀಡಾಪಟುಗಳಿಗೆ ಮೂರು ದಿನಗಳ ಕಾಲ ಬೆಳಗಿನ ಟಿಪನ್ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಬೇರೆ ತಾಲೂಕಿನಿಂದ ಬರುವವರಿಗೆ ವಸತಿ ಸೌಲಭ್ಯವನ್ನು ಕಲ್ಪಿಸಲಾಗಿದೆ. ಕಾರ್ಯಕ್ರಮಕ್ಕೆ ತಾವುಗಳು ಬರುವದರ ಜೊತೆಗೆ ಕುಟುಂಬದ ಸದಸ್ಯರನ್ನು ಸಹ ಕರೆದುಕೊಂಡು ಬರಲು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ ಮಾತನಾಡಿ, ಕ್ರೀಡಾಕೂಟಕ್ಕೆ ಸಮಿತಿಯಯಲ್ಲಿ ನೇಮಿಸಲಾದ ಅಽಕಾರಿ ಹಾಗೂ ಸಿಬ್ಬಂದಿಗಳ ಜವಾಬ್ದಾರಿಗಳನ್ನು ತಿಳಿಸಿದರು.

ಸಭೆಯಲ್ಲಿ ಜಿ.ಪಂ ಮುಖ್ಯ ಯೋಜನಾಽಕಾರಿ ಪುನಿತ್ ಆರ್, ಮುಖ್ಯ ಲೆಕ್ಕಾಽಕಾರಿ ಸಿದ್ದರಾಮೇಶ್ವರ ಉಕ್ಕಲಿ, ಆರ್‌ಡಿ.ಪಿಆರ್‌ನ ಕಾರ್ಯನಿರ್ವಾಹಕ ಅಭಿಯಂತರ ಬಿ.ಎಸ್.ಬಿರಾದಾರ, ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯ ಕಾರ್ಯನಿರ್ವಾಹಕ ಅಭಿಯಂತರ ಆಕಾಶ, ಸಹಾಯಕ ನಿರ್ದೇಶಕರಾದ ವೆಂಕಟೇಶ ತಿಮ್ಮನಾಯಕ, ಭೀಮಪ್ಪ ತಳವಾರ, ಪಿಡಿಒ ಸಂಘದ ಅಧ್ಯಕ್ಷ ರಾಜು ವಾರದ ಸೇರಿದಂತೆ ಇತರರು ಉಪಸ್ಥಿತರಿದ್ದರು.