ಚಿತ್ರದುರ್ಗ: ವಿವಿಧ ಇಲಾಖೆಗಳು ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ(ಡಿಎಂಎಫ್)ಅನುದಾನದಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ತ್ವ ರಿತವಾಗಿ ಪೂರ್ಣಗೊಳಿಸಿ ವರದಿ ನೀಡಬೇಕೆಂದು ಡಿಸಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ ಅನುದಾನದಿಂದ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ,ಈ ಅನುದಾನದಲ್ಲಿ ಹಂಚಿಕೆ ಮಾಡಿ ಕಾಮಗಾರಿಗಳ ವಿವರ,ಪೂರ್ಣಗೊಂಡಿರುವ,ಪ್ರಗತಿಯಲ್ಲಿ ರುವ ಬಾಕಿ ಇರುವ ಕಾಮಗಾರಿಗಳ ಮಾಹಿತಿ,ಅನುದಾನದ ಲಭ್ಯತೆ ಹಾಗೂ ಬೇಕಾಗಿರುವ ಅನುದಾನದ ಮಾಹಿತಿ,ಪೂರ್ಣಗೊಂಡಿರು ವ ಕಾಮಗಾರಿಗಳ ಬಳಕೆ ಪ್ರಮಾಣ ಪತ್ರದ ಸಂಪೂರ್ಣ ಮಾಹಿತಿಯೊಂದಿಗೆ ಒಂದು ವಾರದೊಳಗೆ ವರದಿ ನೀಡುವಂತೆ ನಿರ್ದೇಶಿಸಿದ ರು.
ನಿರ್ಮಿತಿ ಕೇಂದ್ರದಿಂದ ಡಿಎಂಎಫ್ ನಿಧಿ ಅನುದಾನದಲ್ಲಿ 2021-22ರಿಂದ ಇಲ್ಲಿಯವರೆಗೂ 420 ಕಾಮಗಾರಿಗಳನ್ನು ಅನುಷ್ಠಾನ ಗೊಳಿಸಲಾ ಗಿದೆ. ಇದರಲ್ಲಿ 286 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು,ಉಳಿದ ಕಾಮಗಾರಿಗಳು ಪ್ರಗತಿಯಲ್ಲಿವೆ. ಪೂರ್ಣಗೊಂಡಿರುವ ಕಾಮ ಗಾರಿಗಳಿಗೆ ಬಳಕೆ ಪ್ರಮಾಣ ಪತ್ರವನ್ನೂ ಸಲ್ಲಿಸಲಾಗಿದೆ ಎಂದು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಹರೀಶ್‌ಕುಮಾರ್ ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಡಿಸಿ ಪ್ರಗತಿಯಲ್ಲಿರುವ ಹಾಗೂ ಬಾಕಿ ಇರುವ ಕಾಮಗಾರಿಗಳನ್ನು ತಕ್ಷಣವೇ ಪ್ರಾರಂಭಿಸಿ ತ್ವರಿತವಾಗಿ ಪೂರ್ಣ ಗೊಳಿಸಲು ಕ್ರಮ ವಹಿಸಬೇಕೆಂದರು. ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿ ಸಿದರು. ಜಿಪಂ ಸಿಇಒ ಎಸ್.ಜೆ.ಸೋಮಶೇಖರ್,ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ಮಹೇಶ್,ಡಿಎಚ್‌ಒ ಡಾ.ಜಿ.ಪಿ. ರೇಣುಪ್ರಸಾದ್,ಡಿಎಸ್ ಡಾ.ಎಸ್.ಪಿ.ರವೀಂದ್ರ ಮತ್ತಿತರರು ಇದ್ದರು.
---