ಜಿಲ್ಲೆ

ಡಿಕೆಶಿ, ಸಿದ್ದರಾಮಯ್ಯ ಸ್ಪರ್ಧೆ ಬೇಡ

ಹುಬ್ಬಳ್ಳಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಬಿಟ್ಟು ರಾಜ್ಯಾದ್ಯಂತ ಸುತ್ತಾಡಿ, ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದ್ದಾರೆ.

ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಬ್ಬರೂ ನಾಯಕರು ತಾವು ಸ್ಪರ್ಧಿಸುವ ಒಂದೇ ಕ್ಷೇತ್ರದಲ್ಲಿ ಪ್ರಚಾರ ನಡೆಸುವುದಕ್ಕೆ ಸೀಮಿತವಾಗುವುದು ಬೇಡ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸದೇ ಅಧಿಕಾರ ನಡೆಸಬಹುದು. ಇಬ್ಬರೂ ನಾಯಕರು ರಾಜ್ಯಾದ್ಯಂತ ಪ್ರವಾಸ ಕೈಂಗೊಡು, ಪಕ್ಷವನ್ನು ಅಧಿಕಾರಕ್ಕೆ ತರಲಿ ಎಂದು ಹೇಳಿದರು.