ಸಾಂದರ್ಭಿಕ ಚಿತ್ರ 
ಜಿಲ್ಲೆ

ಡಿಪ್ಲೊಮಾ ಕೋರ್ಸ್ಗೆ ಅರ್ಜಿ ಆಹ್ವಾನ

ಕಲಬುರಗಿ: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ (ಡಿಎಚ್‌ಟಿಟಿ) ಕೋರ್ಸ್ ಕಲಿಕೆಗಾಗಿ ೪೪ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ೨,೫೦೦ ರೂ. ಶಿಷ್ಯವೇತನ ನೀಡಲಾಗುತ್ತದೆ. ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುತ್ತದೆ. ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿವೆ. ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ)-೨೨ ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು)-೧೭ ಅಭ್ಯರ್ಥಿಗಳು, ಎಸ್‌ಪಿಕೆಎಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ೩ ಅಭ್ಯರ್ಥಿಗಳು, ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ)- ೩ ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) ೨ ಸೇರಿ ಒಟ್ಟು ೪೪ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ನಿಗದಿತ ಅರ್ಜಿ ನಮೂನೆಯನ್ನು ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-೫೮೨೧೦೨ ವಿಳಾಸಕ್ಕೆ ಮೇ ೩೧ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ. ದೂ. ೦೮೩೭೨-೨೯೭೨೨೧, ಮೊ. ೯೪೪೯೧೬೨೮೨೨ ಅಥವಾ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಪಂ, ಕಲಬುರಗಿ. ಮೊ. ೮೪೫೩೩೮೧೭೦೦, ೯೮೮೬೪೩೫೧೮೫, ೮೯೭೧೧೧೮೫೪೭ಗೆ ಸಂಪರ್ಕಿಸಬಹುದು.