ಜಿಲ್ಲೆ

ಡಿಪ್ಲೊಮಾಗೆ ಅರ್ಜಿ ಆಹ್ವಾನ

ಚಾಮರಾಜನಗರ: ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2025-26ನೇ ಸಾಲಿಗೆ ವಿವಿಧ ಇಂಜಿನಿಯರಿಂಗ್ ಕೋರ್ಸ್‌ಗಳ ಪ್ರಥಮ ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮೆರಿಟ್ ಆಧಾರಿತ ಪ್ರವೇಶಾತಿ ನಡೆಯಲಿದ್ದು, ವ್ಯಾಸಂಗ ಮಾಡಲು ಇಚ್ಛಿಸುವ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಖುದ್ದಾಗಿ ಮೇ 15ರ ಸಂಜೆ 5.30ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಾಲೇಜು ಕಚೇರಿ ಸಂಪರ್ಕಿಸಬಹುದು ಹಾಗೂ ಪ್ರಾಂಶುಪಾಲ ಎಚ್.ಜಿ. ಲೋಕೇಶ್ ಮೊ.ಸಂ 9880451356 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.