ಜಿಲ್ಲೆ

ಡಿಮ್ಹಾನ್ಸ್ ಪ್ರಯೋಗಾಲಯಕ್ಕೆ ಇನ್ನಷ್ಟು ಸೌಕರ್ಯ

ಧಾರವಾಡ: ಹುಬ್ಬಳ್ಳಿಯ ಕಿಮ್್ಸ ಹಾಗೂ ಧಾರವಾಡ ಡಿಮ್ಹಾನ್ಸ್ ನಲ್ಲಿರುವ ಕೋವಿಡ್ ಪ್ರಯೋಗಾಲಯಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಡಿಮ್ಹಾನ್ಸ್ ಪ್ರಯೋಗಾಲಯಕ್ಕೆ ಅಗತ್ಯವಿರುವ ಇನ್ನಷ್ಟು ಉಪಕರಣಗಳನ್ನು ಪೂರೈಸಲಾಗುವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್ ತಪಾಸಣೆಯ ಪ್ರಮಾಣ ಇನ್ನಷ್ಟು ಹೆಚ್ಚಿಸಲು ಡಿಮ್ಹಾನ್ಸ್ ಪ್ರಯೋಗಾಲಯಕ್ಕೆ ಅಗತ್ಯವಿರುವ ಬಯೋಸೇಫ್ಟಿ ಕ್ಯಾಬಿನೆಟ್ ಖರೀದಿಗೆ ಅನುಮೋದನೆ ನೀಡಲಾಗುವುದು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ಡಿಮ್ಹಾನ್ಸ್ ಪ್ರಯೋಗಾಲಯಕ್ಕೆ ಪ್ರಯೋಗಾಲಯ ತಂತ್ರಜ್ಞರನ್ನೂ ಒದಗಿಸಲಾಗುವುದು ಎಂದರು.

ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಾಯಿಸಿಕೊಂಡು ಹೊರರಾಜ್ಯಗಳಿಂದ ಜಿಲ್ಲೆಗೆ ಬರುತ್ತಿರುವ ಜನರನ್ನು ಸಂರ್ಪಸಿ ಅಗತ್ಯವಿದ್ದರೆ ತಪಾಸಣೆಗೊಳಪಡಿಸುವ ಕಾರ್ಯ ನಿರ್ವಹಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಕೋವಿಡ್​ಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ಕಂಟೇನ್ಮೆಂಟ್, ಕ್ವಾರಂಟೈನ್, ಸೇವಾಸಿಂಧು, ಹೆಲ್ತ್​ವಾಚ್ ಮತ್ತಿತರ ಮೊಬೈಲ್ ಅಪ್ಲಿಕೇಶನ್​ಗಳಲ್ಲಿ ನಿರಂತರವಾಗಿ ಪರಿಷ್ಕರಿಸುವ ಕಾರ್ಯವನ್ನು ಪರಿಶೀಲಿಸಿದರು.

ಜಿ.ಪಂ. ಸಿಇಒ ಡಾ. ಬಿ.ಸಿ. ಸತೀಶ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಮಹ್ಮದ್ ಜುಬೇರ್, ಕಿಮ್್ಸ ತಜ್ಞವೈದ್ಯ ಡಾ. ಲಕ್ಷ್ಮೀಕಾಂತ, ಡಿಮ್ಹಾನ್ಸ್​ನ ಪ್ರೊ. ರಾಘವೇಂದ್ರ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಶವಂತ ಮದೀನಕರ್, ಇತರರಿದ್ದರು.