ಚಿತ್ರದುರ್ಗ: ದಾವಣಗೆರೆ ವಿವಿಯ ಚಿತ್ರದುರ್ಗ ಜಿ.ಆರ್. ಹಳ್ಳಿ ಜ್ಞಾನಗಂಗೋತ್ರಿ ಸ್ನಾತಕೋತ್ತರ ಕೇಂದ್ರವನ್ನು ಜಿಲ್ಲಾಧಿಕಾರಿ ಹೊಸ ಕಟ್ಟಡಕ್ಕೆ ಸ್ಥಳಾಂತರಿಸಿ, ಇದನ್ನು ಸರ್ಕಾರಿ ಮೆಡಿಕಲ್ ಕಾಲೇಜಿಗೆ ಪೂರ್ಣ ಪ್ರಮಾಣದಲ್ಲಿ ವಹಿಸಿಕೊಡಬೇಕೆಂದು ಒತ್ತಾಯಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಬುಧವಾರ ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ದ್ವಿತೀಯ ಪಿಯುಸಿ ತೇರ್ಗಡೆ ಆಗುವಂಥ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಬಿಎಸ್ಸಿ ಅಲೈಡ್ ಹೆಲ್ತ್ ಸೈನ್ಸಸ್‌ನ ಹಲವು ಕೋರ್ಸ್‌ಗಳಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಆದರೆ, ಮೂಲ ಸೌಕರ್ಯಗಳ ಕೊರತೆ ಕಾರಣಕ್ಕೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಕೋರ್ಸ್‌ಗಳ ಪ್ರಾರಂಭವಾಗುವ ಬಗ್ಗೆ ಅನುಮಾನವಿದೆ. ಆದ್ದರಿಂದ ಸ್ನಾತಕೋತ್ತರ ಕೇಂದ್ರವನ್ನು ಡಿಸಿ ಕಚೇರಿ ಹೊಸ ಕಟ್ಟಡಕ್ಕೆ ಸ್ಥಳಾಂತರಿಸಿ, ಸ್ನಾತಕೋತ್ತರ ಕೇಂದ್ರದ ಕಟ್ಟಡದಲ್ಲೇ ಕೋರ್ಸ್‌ಗಳ ಪ್ರಾರಂಭಕ್ಕೆ ಪ್ರಸಕ್ತ ಸಾಲಿನಿಂದಲೇ ಅನುಮತಿ ಕೊಡಬೇಕೆಂದು ಸೇನೆ ಜಿಲ್ಲಾಧ್ಯಕ್ಷ ಕೆ.ಟಿ. ಶಿವಕುಮಾರ್ ಆಗ್ರಹಿಸಿದರು.
ವೀಣಾಗೌರಣ್ಣ, ಗೋಪಿನಾಥ್, ಕಮಲಮ್ಮ, ರತ್ನಮ್ಮ, ಅವಿನಾಶ್, ಮುಜಾಹಿದ್, ಜಗದೀಶ್, ಚಂದನ, ಶಶಿಧರ್, ಸುರೇಶ್, ಅಖಿಲೇಶ್, ವಿಜಯ ಬಾಬು ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.