ಬಾಗಲಕೋಟೆ: ಡಿಸಿಎಂ ಡಿ.ಕೆ.ಶಿವಕುಮಾರ ಹಾಗೂ ಕಾಂಗ್ರೆಸ್ ಸರ್ಕಾರವು ಸಂವಿಧಾನ ವಿರೋಧಿ ಎಂದು ಆರೋಪಿಸಿ ಬಾಗಲಕೋಟೆ ಮತಕ್ಷೇತ್ರದ ಬಿಜೆಪಿ ನಗರ ಮಂಡಲ ವತಿಯಿಂದ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಡಿಸಿಎಂ ಡಿ.ಕೆ.ಶಿವಕುಮಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಕೃತಿ ದಹಿಸಿ ಕಿಡಿಕಾರಿದರು.
ಈ ಸಂದರ್ಭದಲ್ಲಿ ಬಿಜೆಪಿ ಬೆಳಗಾವಿ ವಿಭಾಗದ ಪ್ರಮುಖ ಬಸವರಾಜ ಯಂಕ0ಚಿ ಮಾತನಾಡಿ, ಕಾಂಗ್ರೆಸ್ ಸರ್ಕಾರವು ಸಂವಿಧಾನ ವಿರೋಽಯಾಗಿದೆ. ಕೇಂದ್ರದಲ್ಲಿ ಅಽಕಾರದಲ್ಲಿದ್ದಾಗಲು ಬಹು ಸಂಖ್ಯಾತ ಹಿಂದುಗಳು, ದಲಿತರಿಗೆ ಅನ್ಯಾಯ ಮಾಡುತ್ತಾ ಬಂದಿದೆ. ರಾಜ್ಯದಲ್ಲಿಯೂ ಅದೇ ಮುಂದು ವರೆದಿದೆ. ಮುಸ್ಲಿಂ ತುಷ್ಠಿಕರಣ ಮಾಡುವುದೇ ಅವರ ಮುಖ್ಯ ಕೆಲಸ ಎಂದು ದೂರಿದರು.
ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮುತ್ತಣ್ಣ ಬೆಣ್ಣೂರ ಮಾತನಾಡಿ, ಕಾಂಗ್ರೆಸ್ ದಲಿತರು, ಹಿಂದು ಸಮಾಜಕ್ಕೆ ಅನ್ಯಾಯ ಮಾಡುತ್ತಾ ಬಂದಿದೆ. ಡಾ.ಬಾಬಾ ಸಾಹೇಬರ ವಿಚಾರಧಾರೆಗಳ ವಿರುದ್ಧವಾಗಿ ಆಡಳಿತ ಮಾಡುವುದು ಅವರಿಗೆ ರೂಢಿಗತವಾಗಿದೆ. ಈಗ ಡಿಸಿಎಂ ಡಿ.ಕೆ.ಶಿವಕುಮಾರ ಅವರ ಹೇಳಿಕೆಯೇ ಸಾಕ್ಷಿ. ಸಂವಿಧಾನ ಬದಲಾಯಿಸುವ ಹಕ್ಕು ಇವರಿಗೆ ಇಲ್ಲ. ಮೊದಲಿನಿಂದ ಸಂವಿಧಾನಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಾ ಬಂದಿದ್ದಾರೆ. ಸಂವಿಧಾನ ವಿಷಯದಲ್ಲಿ ಜನರ ದಿಕ್ಕು ತಪ್ಪಿಸುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.
ಬಿಟಿಡಿಎ ಮಾಜಿ ಸದಸ್ಯ ಶಿವಾನಂದ ಟವಳಿ ಮಾತನಾಡಿ, ಸಂವಿಧಾನ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ. ಡಾ.ಬಾಬಾಸಹೇಬರ ಅಂಬೇಡ್ಕರ ಅವರ ತತ್ವಾದರ್ಶವನ್ನು ಎಂದಿಗೂ ಪಾಲನೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಎಲ್ಲ ಅವಽಯಲ್ಲಿ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಂಡಿದೆ. ಒಂದು ಧರ್ಮಕ್ಕೆ ಮೀಸಲಾತಿ ಕಲ್ಪಿಸುತ್ತಾರೆ ಎಂದರೇ ಅವರ ದೃಷ್ಠಿಕೋನ ಎಲ್ಲರಿಗೂ ಅರ್ಥವಾಗುತ್ತದೆ. ಕೂಡಲೇ ಡಿಸಿಎಂ ಡಿ.ಕೆ.ಶಿವಕುಮಾರ ಅವರು ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಬಿಟಿಡಿಎ ಮಾಜಿ ಅಧ್ಯಕ್ಷ ಜಿ.ಎನ್.ಪಾಟೀಲ, ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆನ್ನವರ, ಉಪಾಧ್ಯಕ್ಷೆ ಶೋಭಾರಾವ, ಸಭಾಪತಿ ಯಲ್ಲಪ್ಪ ನಾರಾಯಣಿ, ಮುಖಂಡರಾದ ಡಾ.ಎಂ.ಎಸ್.ದಡ್ಡೇನವರ, ಬಸವರಾಜ ಅವರಾದಿ, ಸುರೇಶ ಮಜ್ಜಗಿ, ರಾಮಣ್ಣ ಹೆರಕನ್ನವರ , ಶಂಕರ ಕದಂ, ಮುತ್ತು ಕುರಬರ, ಶಶಿಕಲಾ ಮಜ್ಜಗಿ, ಸರಸ್ವತಿ ಕುರಬರ, ರಾಮು ರಾಮವಾಡಗಿ ಇತರರು ಇದ್ದರು.