ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಎಚ್.ಬಿ.ಸತೀಶ್ ಅವರನ್ನು ಬ್ಯಾಂಕ್‌ನ ಅಧ್ಯಕ್ಷರು ಹಾಗೂ ನಿರ್ದೇಶಕರು ಅಭಿನಂದಿಸಿದರು. ಡಿ.ಎಸ್.ಸುರೇಶ್, ಎಸ್.ಜಿ.ರಾಮಪ್ಪ, ಕೆ.ಆರ್.ಆನಂದಪ್ಪ, ಎಚ್.ಬಿ.ಶಿವಣ್ಣ, ಡಿ.ಎಸ್.ತೇಜಸ್ವಿನಿ ಮತ್ತಿತರರಿದ್ದರು. 
ಜಿಲ್ಲೆ

ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿ ಎಚ್.ಬಿ.ಸತೀಶ್ ಅವಿರೋಧ ಆಯ್ಕೆ

ಚಿಕ್ಕಮಗಳೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ ನೂತನ ಉಪಾಧ್ಯಕ್ಷರಾಗಿ ಎಚ್.ಬಿ. ಸತೀಶ್ ಅವರು ಶನಿವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶನಿವಾರ ಬೆಳಗ್ಗೆ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಉಪಾಧ್ಯಕ್ಷರ ಚುನಾವಣೆಯಲ್ಲಿ ಸತೀಶ್ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿದ್ದ ಉಪ ವಿಭಾಗಾಧಿಕಾರಿ ದಲ್ಜಿತ್‌ಕುಮಾರ್ ಅವಿರೋಧ ಆಯ್ಕೆ ಘೋಷಣೆ ಮಾಡಿದರು.

ನೂತನ ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್, ಬ್ಯಾಂಕಿನ ಆಡಳಿತ ಮಂಡಳಿಯ ಒಮ್ಮತದ ಅಭ್ಯರ್ಥಿಯಾಗಿ ಎಚ್.ಬಿ ಸತೀಶ್ ಅವರು ಅವಿರೋಧ ಆಯ್ಕೆಯಾಗಿದ್ದು, ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಿ ಎಂದು ಶುಭ ಹಾರೈಸಿದರು.

ನಿರ್ದೇಶಕ ಎಂ.ಎಸ್. ನಿರಂಜನ್ ಮಾತನಾಡಿ, ಸಹಕಾರ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರು ಪ್ರೀತಿ, ವಿಶ್ವಾಸ, ಒಮ್ಮತದಿಂದ ಆಯ್ಕೆಮಾಡಬೇಕೆಂಬ ನಿರ್ಧಾರಕ್ಕೆ ಬದ್ಧರಾಗಿ ನೂತನ ಉಪಾಧ್ಯಕ್ಷ ಎಚ್.ಬಿ ಸತೀಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿz್ದೆÃವೆ ಎಂದು ಹೇಳಿದರು.

ಹಲವು ವರ್ಷಗಳಿಂದ ಸತೀಶ್ ವಿವಿಧ ಸಹಕಾರ ಸಂಸ್ಥೆಗಳಲ್ಲಿ ಕೆಲಸ ಮಾಡಿದ ಅಪಾರ ಅನುಭವ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಡಿಸಿಸಿ ಬ್ಯಾಂಕಿನ ಶ್ರೇಯೋಭಿವೃದ್ಧಿಗೆ ಉತ್ತಮ ಕೆಲಸ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನೂತನ ಉಪಾಧ್ಯಕ್ಷ ಎಚ್.ಬಿ ಸತೀಶ್ ಮಾತನಾಡಿ, ಈ ಸ್ಥಾನಕ್ಕೆ ನನ್ನನ್ನು ಅವಿರೋಧ ಆಯ್ಕೆ ಮಾಡಿದ ಅಧ್ಯಕ್ಷರೂ, ಎಲ್ಲಾ ನಿರ್ದೇಶಕರಿಗೆ ಹೃದಯ ಪೂರ್ವಕ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ಕಳೆದ ೨೧ ವರ್ಷಗಳಿಂದ ಕೆಳಗೂರು ಸಹಕಾರ ಸಂಘದ ನಿರ್ದೇಶಕರಾಗಿ ಅನುಭವದ ಆಧಾರದಲ್ಲಿ ಈ ಬಾರಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷನಾಗಿz್ದÉÃನೆ. ಸಹಕಾರ ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾದ ಎಸ್.ಜಿ ರಾಮಪ್ಪ, ಕೆ.ಆರ್.ಆನಂದಪ್ಪ, ಎಚ್.ಬಿ ಶಿವಣ್ಣ, ಡಿ.ಸಿ.ಶಂಕರಪ್ಪ, ಎಸ್.ಎನ್.ರಾಮಸ್ವಾಮಿ, ಪರಮೇಶ್ವರಪ್ಪ, ಎಚ್.ವಿ.ಸಂದೀಪ್, ಸಹಕಾರ ಸಂಘಗಳ ಉಪ ನಿಬಂಧಕರಾದ ಡಿ.ಎಸ್.ತೇಜಸ್ವಿನಿ, ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ತಿಮ್ಮಪ್ಪ, ಬಿಜೆಪಿ ಮುಖಂಡರಾದ ಎಚ್.ಸಿ. ಕಲ್ಮರುಡಪ್ಪ, ಕೋಟೆ ರಂಗನಾಥ್, ಟಿ.ರಾಜಶೇಖರ್, ಕಾಂಗ್ರೆಸ್ ಮುಖಂಡ ಪ್ರಕಾಶ್ ಮತ್ತಿತರರಿದ್ದರು.