ಜಿಲ್ಲೆ

ಡೆಂಗಿ ಜ್ವರ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ

ಹಾಸನ: ಡೆಂಗ್ಯೂ ತಡೆಗಟ್ಟುವ ಕ್ರಮಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕು ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರು ಸೂಚಿಸಿದರು.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರಿಯ ಡೆಂಗ್ಯೂ ದಿನಾಚರಣೆಯ ಅಂತರಾ ಇಲಾಖಾ ಸಮನ್ವಯ ಸಭೆ ನಡೆಸಿ ಮಾತನಾಡಿದ ಅವರು, ಅರಸೀಕೆರೆ, ಚನ್ನರಾಯಪಟ್ಟಣ, ಹೊಳೆನರಸೀಪುರ ಈ ಜಾಗಗಳಲ್ಲಿ ಹೆಚ್ಚಾಗಿ ಡೆಂಗ್ಯೂ ಕಂಡುಬರುತ್ತಿದ್ದು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಡೆಂಗ್ಯೂ ಜ್ವರವು ನಾಲ್ಕು ವಿಧದ ಡೆಂಗ್ಯೂ ವೈರಸ್‌ಗಳಲ್ಲಿ ವಸತಿಗೃಹಗಳಲ್ಲಿ ಮತ್ತು ಸುತ್ತಮುತ್ತ ಉಂಟಾಗುತ್ತದೆ. ಶಾಲೆಗಳಲ್ಲಿ, ಕಾಲೇಜುಗಳಲ್ಲಿ, ಮನೆಗಳಲ್ಲಿ, ಕಚೇರಿಗಳಲ್ಲಿ, ಬಸ್ಸ್ ಡಿಪೋಗಳಲ್ಲಿ, ಅಂಗನವಾಡಿಗಳಲ್ಲಿ, ಶೌಚಾಲಯಗಳಲ್ಲಿ, ಚರಂಡಿಗಳಲ್ಲಿ, ಎಲ್ಲಾ ಕಡೆಯಲ್ಲು ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ, ಮತ್ತಿತರ ಅಧಿಕಾರಿಗಳು ಉಪಸ್ಧಿತರಿದ್ದರು.