ಬಾಗಲಕೋಟೆ: ಶಾಲೆ ಹಾಗೂ ಅಂಗನವಾಡಿಗಳಲ್ಲಿ ಡೆಂಗ್ಯೂ ಹಾಗೂ ಮಲೇರಿಯಾ ಬಗ್ಗೆ ಹೆಚ್ಚಿನ ಜಾಗೃತಿ ಅಗತ್ಯವೆಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಸೋಮವಾರ ಜರುಗಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಡೆಂಗ್ಯೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಲಿಸಾ ಟೆಸ್ಟ್ ಮಾಡಿಸಿ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಶಾಲಾ ಮಕ್ಕಳನ್ನು ಪರೀಕ್ಷೆ ಮಾಡುವ ಮೂಲಕ ಚಿಕಿತ್ಸೆ ನೀಡಬೇಕು. ಟಿಬಿ ಪ್ರಕಟಣಗಳಲ್ಲಿಯೂ ಪತ್ತೆ ಹಚ್ಚುವ ಮೂಲಕ ಸೂಕ್ತ ಚಿಕಿತ್ಸೆ ನೀಡುವಂತಾಗಬೇಕು. ಈ ಸಂದರ್ಭದಲ್ಲಿ 100 ದಿನಗಳ ಟಿಬಿ ಜಾಗೃತಿ ಶಿಬಿರಕ್ಕೆ ಚಾಲನೆ ನೀಡಲಾಯಿತು. ಎಚ್.ಐ.ವಿ ಬಗ್ಗೆಯು ಜಾಗೃತಿ ಮೂಡಿಸುವಂತೆ ಅಧಿಕಾರಿಗಳು ಸಿಇಓ ಕುರೇರ ಸೂಚಿಸಿದರು.
ಸಭೆಯಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುವರ್ಣಾ ಕುಲಕರ್ಣಿ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.