ಮೈಸೂರು: ಆಶ್ರಿತ ರೋಗಗಳ ನಿಯಂತ್ರಣಕ್ಕೆ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಸಿ.ಸುವರ್ಣ ತಿಳಿಸಿದರು.
ರಾಷ್ಟ್ರೀಯ ಡೆಂೆ ದಿನಾಚರಣೆ ಅಂಗವಾಗಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಂತ್ರಣಾಧಿಕಾರಿ ಕಚೇರಿ ವತಿಯಿಂದ ಜಾಕಿ ಕ್ವಾಟ್ರರ್ಸ್‌ನಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಡೆಂೆ ಜ್ವರ ನಿಯಂತ್ರಣ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂಶಯಾಸ್ಪದ ಡೆಂೆ, ಚಿಕೂನ್‌ಗುನ್ಯಾ ಜ್ವರ ಬಾಧಿತರ ರಕ್ತ ಮಾದರಿ ಪರೀಕ್ಷೆಯನ್ನು ಮೇಟಗಳ್ಳಿಯಲ್ಲಿರುವ ಜಿಲ್ಲಾಸ್ಪತ್ರೆಯ ಪ್ರಯೋಗಾಲಯದಲ್ಲಿ ಉಚಿತವಾಗಿ ಮಾಡಲಾಗುತ್ತದೆ. ಈ ಸೌಲಭ್ಯವನ್ನು ಸಾರ್ವಜನಿಕರು ಬಳಕೆ ಮಾಡಿಕೊಳ್ಳಬೇಕು ಎಂದರು.
ಮನೆ ಮನೆಗೆ ಭೇಟಿ ನೀಡಿ ಈಡೀಸ್ ಲಾರ್ವಾ ಸಮೀಕ್ಷೆ ಕಾರ್ಯವನ್ನು ನಿರಂತರವಾಗಿ ಮಾಡಲಾಗುತ್ತಿದೆ. ಪ್ರತಿ ತಿಂಗಳ ಮೊದಲನೇ ಮತ್ತು ಮೂರನೇ ಶುಕ್ರವಾರದಂದು ಇಲಾಖಾ ಕ್ಷೇತ್ರ ಸಿಬ್ಬಂದಿಯನ್ನು ನಿಯೋಜಿಸಿ ನಗರಗಳಲ್ಲಿ ಲಾರ್ವಾ ಸಮೀಕ್ಷೆ ಮತ್ತು ಜ್ವರ ಸಮೀಕ್ಷೆ ನಡೆಸಲಾಗುತ್ತಿದೆ ಎಂದರು.
ಡೆಂೆ ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವ ಪ್ರದೇಶಗಳಲ್ಲಿ ಸ್ವಯಂ ಸೇವಕರನ್ನು ಗುರುತಿಸಿ, ಗೌರವಧನ ನೀಡುವ ಮೂಲಕ ಲಾರ್ವಾ ಸಮೀಕ್ಷೆ ನಡೆಸುತ್ತಿದ್ದು, ಈ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿ ಆರೋಗ್ಯ ಶಿಕ್ಷಣ ನೀಡಲಾಗುತ್ತಿದೆ ಎಂದವರು ಹೇಳಿದರು.
ಪ್ರತಿ ಶುಕ್ರವಾರ ಲಾರ್ವಾ ಸಮೀಕ್ಷೆಯನ್ನೂ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ ಕೈಗೊಂಡಿದ್ದು, ಲಾರ್ವಾನಾಶ ಮಾಡಿ ಸೊಳ್ಳೆಗಳ ಉತ್ಪತ್ತಿ ಮತ್ತು ಬೆಳವಣಿಗೆಯ ಮಟ್ಟವನ್ನು ಕಡಿಮೆ ಮಾಡುವುದರಿಂದ ಡೆಂೆ ಜ್ವರ ಪ್ರಮಾಣವನ್ನು ಕಡಿಮೆ ಮಾಡಬಹುದು.
ಜ್ವರ ಬಂದ ತಕ್ಷಣ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು. ಡೆಂೆ ಜ್ವರ ಬರದಂತೆ ಕ್ರಮ ವಹಿಸುವ ನಿಟ್ಟಿನಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟಿಕೊಳ್ಳಬೇಕು. ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಡೆಂೆ ಜ್ವರ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ದಿಸೆಯಲ್ಲಿ ಆರೋಗ್ಯ ಇಲಾಖೆಯೊಂದಗೆ ಜನಪ್ರತಿನಿಧಿಗಳು ಸಹಕಾರವೂ ಬಹಳ ಮುಖ್ಯ ಎಂದರು.
ಪಾಲಿಕೆಯ ಮಾಜಿ ಸದಸ್ಯೆರಾದ ರಜಿನಿ ಅಣ್ಣಯ್ಯ, ಛಾಯಾದೇವಿ, ಎಂಟಾಮಾಲಾಜಿಸ್ಟ್ ಉಷಾ, ಜಿಲ್ಲಾ ಆರ್‌ಸಿಎಚ್ ಸಿರಾಜ್ ಮಹಮದ್, ತಾಲೂಕು ಆರೋಗ್ಯ ಅಧಿಕಾರಿ ಪುಟ್ಟತಾಯಮ್ಮ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ನವೀನ್, ಆರೋಗ್ಯ ಶಿಕ್ಷಣಾಧಿಕಾರಿಗಳಾದ ಮುನೀಂದ್ರಮ್ಮ ಮತ್ತು ಪದ್ಮಾವತಿ ಇನ್ನಿತರರಿದ್ದರು.