ತಿ.ನರಸೀಪುರ: ತಿ.ನರಸೀಪುರ ತಾಲೂಕಿನ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ನುಗ್ಗೇಹಳ್ಳಿಕೊಪ್ಪಲು ಗ್ರಾಮದಲ್ಲಿ ಮಂಗಳವಾರ ಆಸ್ತಿ ವಿಚಾರಕ್ಕೆ ನಡೆದ ಗಲಾಟೆ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಗೊಂಡಿದೆ.
ಸ್ವಂತ ತಮ್ಮನೇ ಅಣ್ಣ ಮತ್ತು ಅತ್ತಿಗೆಯನ್ನು ಕೊಲೆ ಮಾಡಿದ್ದಾನೆ. ಶಿವಲಿಂಗೇಗೌಡ (60), ಭಾರತಿ (40) ಮೃತರು. ಹನುಮಂತೇಗೌಡ ಆರೋಪಿ. ಕೊಲೆ ಮಾಡಿದ ನಂತರ ಆರೋಪಿ ಹನುಮಂತೇಗೌಡ ಪೊಲೀಸ್ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿ ಶರಣಾಗಿದ್ದಾನೆ. ಘಟನೆ ಸಂಬಂಧ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೃತ್ತ ನಿರೀಕ್ಷಕ ಮನೋಜ್‌ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಜರುಗಿಸಿದ್ದಾರೆ
ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಹಲವಾರು ವರ್ಷಗಳಿಂದ ಗಲಾಟೆ ನಡೆಯುತ್ತಿತ್ತು. ಮಂಗಳವಾರ ನಡೆದ ಗಲಾಟೆ ತಾರಕಕ್ಕೇರಿದ್ದು, ಗುದ್ದಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ.