ಕೊಳ್ಳೇಗಾಲ: ಪಟ್ಟಣದ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ರಸ್ತೆಯಲ್ಲಿರುವ ತರಕಾರಿ ಮಳಿಗೆಗೆ ಭಾನುವಾರ ಮುಂಜಾನೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹಣ ಹಾಗೂ ಅಪಾರ ಪ್ರಮಾಣದ ವಸ್ತು ಸುಟ್ಟು ಕರಕಲಾಗಿವೆ.
ಪಟ್ಟಣದ ಸಿದ್ದರಾಜು ನಾಯಕ ಎಂಬುವರಿಗೆ ಸೇರಿದ ಮಹೇಶ್ ಸ್ಟೋರ್ ಎಂಬ ಹೆಸರಿನ ತರಕಾರಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು. ಸುಮಾರು 80 ಸಾವಿರ ನಗದು ಸೇರಿ ಅಪಾರ ಪ್ರಮಾಣದ ತರಕಾರಿ ಹಾಗೂ ಇತರ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.
ಮಳಿಗೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿದ್ದು ಬೆಂಕಿ ಉರಿಯುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ತಿಳಿಸಿದ್ದು, ಬಳಿಕ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ಸಂಭವಿಸುವುದನ್ನು ತಪ್ಪಿಸಿದ್ದಾರೆ.
ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.