ಬೆಟ್ಟದಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023-24ನೇ ಸಾಲಿನ ಘಟಿಕೋತ್ಸವ ಹಾಗೂ ಪಿ.ಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಕಾಪೆರ್ಂಟರ್ ತರಬೇತಿ ಪಡೆದ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸುವ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ನಿತಿನ್ ವೆಂಕಟೇಶ್, ಕೆ.ನಾರಾಯಣಮೂರ್ತಿ, ಜಿ.ನಾಗೇಶ್, ರಾಜಶೇಖರ್ ಇತರರು ಇದ್ದರು. 
ಜಿಲ್ಲೆ

ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಣೆ

ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಂಗಳವಾರ 2023-24ನೇ ಸಾಲಿನ ಘಟಿಕೋತ್ಸವ ಹಾಗೂ ಪಿ.ಎಂ ವಿಶ್ವಕರ್ಮ ಯೋಜನೆಯಡಿ ಕಾಪೆರ್ಂಟರ್ ತರಬೇತಿ ಪಡೆದ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಲೂಕು ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಮಾತನಾಡಿ, ಸರ್ಕಾರದ ಕಾರ್ಯಕ್ರಮಗಳನ್ನು ತಪ್ಪದೆ ಆಯೋಜಿಸಿ ಗ್ರಾಮೀಣ ಭಾಗದ ಜನರಿಗೆ ಸೌಲಭ್ಯ ತಲುಪಿಸುತ್ತಿರುವ ಸಂಸ್ಥೆ ಕಾರ್ಯ ಶ್ಲಾಘನೀಯ ಎಂದು ಪ್ರಸಂಶಿಸಿದರು. ಗ್ರಾಮೀಣ ಮಕ್ಕಳ ಪ್ರತಿಭೆ ವ್ಯಾಪಕವಾಗಿ ಬೆಳೆಯುತ್ತಿದೆ. ಅಂತವರ ಬೆಳವಣಿಗೆಗೆ ಸರ್ಕಾರದ ಸಹಕಾರ ಪ್ರಮುಖವಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ.ನಾರಾಯಣಮೂರ್ತಿ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ನಾಗೇಶ್, ಬೆಟ್ಟದಪುರ ಗ್ರಾ.ಪಂ ಅಧ್ಯಕ್ಷ ರಾಜಶೇಖರ್, ಸದಸ್ಯ ಬಿ.ಸಿ.ಗಿರೀಶ್, ನಿವೃತ್ತ ಶಿಕ್ಷಕ ಸಣ್ಣಸ್ವಾಮಿಗೌಡ, ಗ್ರಾ.ಪಂ ಕಾರ್ಯದರ್ಶಿ ಪಾಂಡು, ಮುಖಂಡ ಶೇಖರ್, ಕಾಲೇಜಿನ ಪ್ರಾಂಶುಪಾಲ ಸೋಮಶೇಖರ್, ಸಿಬ್ಬಂದಿ ಸುನಿಲ್, ಮಲ್ಲೇಶ್, ನಂದೀಶ್, ಉದೇಶ್, ಸುಪ್ರಿತಾ, ಅನುಷಾ ಇತರರು ಇದ್ದರು.