ಕಲಬುರಗಿ: ಪರಿಶಿಷ್ಟ ಪಂಗಡ ನಾಯಕ ತಳವಾರ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವವರ ವಿರುದ್ಧ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳಬೇಕು, ಸುಳ್ಳು ಜಾತಿ ಪ್ರಮಾಣ ಪತ್ರ ವಿತರಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಸ್ಸಿ, ಎಸ್‌ಟಿ ನಕಲಿ ಜಾತಿ ಪ್ರಮಾಣ ಪತ್ರಕಗಳ ತಡೆ ಸಮಿತಿ ಪ್ರಧಾನ ಕಾರ್ಯದರ್ಶಿ ಮರೆಪ್ಪ ನಾಯಕ ಹೇಳಿದರು.
ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾವಿರಾರು ಜನರಿಗೆ ಸುಳ್ಳು ಎಸ್‌ಟಿ ಪ್ರಮಾಣ ಪತ್ರ ವಿತರಿಸಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
೨೦೨೦ರಲ್ಲಿ ಪರಿವಾರ ಮತ್ತು ತಳವಾರ ಸಮುದಾಯಗಳಿಗೆ ಪರಿಶಿಷ್ಟ ಪಂಗಡದ ಸೌಲಭ್ಯ ವಿಸ್ತರಣೆ ಮಾಡಬಹುದು ಎಂದು ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿತ್ತು. ರಾಜ್ಯದಲ್ಲಿ ನಾಯಕ ತಳವಾರ ಮತ್ತು ಪರಿವಾರ ಜಾತಿಯವರಿಗೆ ಎಸ್‌ಟಿ ಪ್ರಮಾಣ ಪತ್ರ ನೀಡಬೇಕು ಎಂದು ಆದೇಶಿಸಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಹಿಂದುಳಿದ ವರ್ಗದ ಪಟ್ಟಿಯ ಕ್ರಮ ಸಂಖ್ಯೆ ೮೮ಎಚ್ ತಳವಾರ ಜನಾಂಗದವರು ಅಂಬಿಗ, ಗಂಗಾಮತಸ್ಥ, ಕಬ್ಬಲಿಗ ಜಾತಿಗೆ ಸೇರಿz್ದÁರೆ. ಇವರು ನಾಯಕ ತಳವಾರ ಜಾತಿಗೆ ಸೇರಿಲ್ಲ. ಇವರಿಗೆ ಪ್ರಮಾಣ ಪತ್ರ ನೀಡುತ್ತಿರುವುದು ಸರಿಯಲ್ಲ. ಕೂಡಲೇ ಜಿ¯್ಲÉಯಲ್ಲಿ ನೀಡಿದ ಎಸ್‌ಟಿ ನಾಯಕ, ನಾಯ್ಕಡ್ ತಳವಾರ, ಪರಿವಾರ ಜಾತಿ ಸಿಂಧುತ್ವ ಪ್ರಮಾಣ ಪತ್ರಗಳನ್ನು ರದ್ದು ಮಾಡಬೇಕು. ಜಾತಿ ಪ್ರಮಾಣ ಪತ್ರ ನೀಡಿದ ತಹಸೀಲ್ದಾರ್ ಅವರನ್ನು ವಜಾಮಾಡಿ ಕ್ರಿಮಿನಲ್ ಕೇಸ್ ದಾಖಲು ಮಾಡಬೇಕು ಎಂದು ಆಗ್ರಹಿಸಿದರು.
ಗೌಡಪ್ಪಗೌಡ ಆಲ್ದಾಳ, ಶರಣು ಸುಬೇದಾರ, ಸಂದೀಪ ಭರಣಿ, ಬಾಬುರಾವ ಬಡಿಗೇರ ಇತರರಿದ್ದರು.