ಜಿಲ್ಲೆ

ತಾಂಡವಪುರದ ಮಹಾರಾಜ ತಾಂತ್ರಿಕ ಕಾಲೇಜಿನಲ್ಲಿ 8ರಂದು ಉದ್ಯೋಗ ಮೇಳ

ಮೈಸೂರು: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಮಾ.8ರ ಬೆಳಗ್ಗೆ 10ರಿಂದ ಸಂಜೆ 4ರ ವರೆಗೆ ನಂಜನಗೂಡು ತಾಲೂಕಿನ ತಾಂಡವಪುರದ ಮಹಾರಾಜ ತಾಂತ್ರಿಕ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಮೈಸೂರು-ಬೆಂಗಳೂರಿನ ಹೆಸರಾಂತ ಕಂಪನಿಗಳು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಿವೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೋಮಾ, ಎಂಬಿಎ, ಸ್ನಾತಕೋತ್ತರದಲ್ಲಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷ ವಯೋಮಿತಿ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್ ಮತ್ತು ಆಧಾರ್ ಕಾರ್ಡ್, ಸ್ವವಿವರದ 10 ಪ್ರತಿಗಳೊಂದಿಗೆ ಹಾಜರಾಗಬಹುದು.

ಮಾಹಿತಿಗಾಗಿ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಕಾರ್ಯಾಲಯ(ದೂ.0821-2970815), ಉದ್ಯೋಗ ವಿನಿಮಯ ಕಚೇರಿ(ದೂ.8095856846) ಸಂಪರ್ಕಿಸಬಹುದು.