ಜಿಲ್ಲೆ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಚಾಮರಾಜನಗರ: ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 55 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ ಸಂಬಂಧ 1:1ರ ಅನುಪಾತದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ 1:1ರ ಅನುಪಾತದಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಜಿಲ್ಲಾ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಸದರಿ ತಾತ್ಕಾಲಿಕ ಆಯ್ಕೆಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಯಾವುದಾರೂ ತಕರಾರು/ ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಜ. 23ರ ಸಂಜೆ 5.30 ಗಂಟೆಯೊಳಗಾಗಿ ಆಯ್ಕೆ ಮತ್ತು ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ, ಚಾಮರಾಜನಗರ ಜಿಲ್ಲೆ, ಚಾಮರಾಜನಗರ ಇವರಿಗೆ ಮುದ್ದಾಂ/ನೊಂದಣಿ ಅಂಚೆ ಮೂಲಕ ಸಲ್ಲಿಸಬೇಕು. ತದನಂತರ ಬರುವ ತಕರಾರು/ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.