ಜಿಲ್ಲೆ

ತಾಯಂದಿರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ


ಯಾದಗಿರಿ: ನಗರ ಹಾಗೂ ಗ್ರಾಮೀಣ ಭಾಗದಲ್ಲಿನ ಹೆಣ್ಣುಮಕ್ಕಳ ಆರೋಗ್ಯ ರಕ್ಷಣೆಗೆ ಸಂಬಂಸಿದಂತೆ ಆಶಾ ಕಾರ್ಯಕರ್ತೆಯರಿ ನಿಯೋಜನೆ ಮಾಡಲಾಗಿದ್ದು, ತಮ್ಮ ವ್ಯಾಪ್ತಿಯ ಗರ್ಭಿಣಿಯರ ಕುರಿತು ಪ್ರತಿ ತಿಂಗಳು ತಪಾಸಣೆ ನಡೆಸುವಂತೆ ಜಿಲ್ಲಾಕಾರಿ ಸ್ನೇಹಲ್ ಆರ್., ಕಟ್ಟುನಿಟ್ಟಿನ ಸೂಚನೆ ನೀಡಿದರು.


ನಗರದ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕರೆದಿದ್ದ ತಾಯಂದಿರ ಮರಣ ಪ್ರಮಾಣ ತಗ್ಗಿಸುವ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಗ್ರಾಮೀಣ ಭಾಗದಲ್ಲಿನ ಆಶಾಗಳು ಪ್ರತಿದಿನ ಮನೆ,ಮನೆಗೆ ಭೇಟಿನೀಡಿ ಗರ್ಭಿಣಿಯರ ಆರೋಗ್ಯದ ಕುರಿತು ತಿಳುವಳಿಕೆ ನೀಡಿಬೇಕು. ಅಲ್ಲದೆ ನಿಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯ ನಿರ್ವಹಿಸಬೇಕು ಎಂದರು.


ವೈದ್ಯಾಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಸಕರ್ಾರ ನಿಗದಿಪಡಿಸಿದ ಸಮಯದವರೆಗೂ ಕಾರ್ಯನಿರ್ವಹಿಸಬೇಕು. ಹೆರಿಗೆ ಪೂರ್ವ ಮತ್ತು ನಂತರದಲ್ಲಿ ವಿಶೇಷವಾಗಿ ತಾಯಿ, ಮಗುವಿನ ಆರೋಗ್ಯದ ಕಾಳಜಿ ವಹಿಸುವ ಮೂಲಕ ತಾಯಿ ಮರಣ ಪ್ರಮಾಣ ಶೂನ್ಯ ಪ್ರಮಾಣಕ್ಕೆ ತರಲು ಶ್ರಮಿಸಬೇಕು ಎಂದು ನಿದರ್ೇಶನ ನೀಡಿದರು.
ಗರ್ಭಿಣಿ ಮರಣ ಹೊಂದುವುದು ಆತಂಕಕಾರಿ ಸಂಗತಿ. ಪ್ರಸವ ಪೂರ್ವ ಹಾಗೂ ನಂತರದ ತಾಯಿ ಹಾಗೂ ಮಗುವಿನ ಆರೋಗ್ಯ ರಕ್ಷಣೆಗೆ ಹಾಗೂ ಅಪೌಷ್ಟಿಕತೆ ಸಮಸ್ಯೆ ನೀಗಿಸಲು ಸರಕಾರ ಸಾಕಷ್ಟು ಅನುದಾನ ನೀಡುತ್ತಿದೆ.

ಇದರ ಸದುಪಯೋಗ ಆಗಬೇಕು. ಜಿಲ್ಲೆಯಲ್ಲಿ ಪ್ರಸವ ಸಮಯದಲ್ಲಿ ಮರಣ ಹೊಂದುವ ಒಂದು ಪ್ರಕರಣವೂ ನಡೆಯಬಾರದು. ಆ ನಿಟ್ಟಿನಲ್ಲಿ ಪ್ರಯತ್ನ ಆಗಬೇಕು ಎಂದರು.
ಜಿಲ್ಲೆಯಲ್ಲಿ ಖಾಲಿ ಇರುವ ಪ್ರಾಥಮಿಕ ಆರೋಗ್ಯ ಸುರಕ್ಷತಾಕಾರಿಗಳ (ಮಹಿಳಾ)ನ್ನು ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಬೇಕು. ಆಶಾ ಕಾರ್ಯಕತರ್ೆಯರು ಮತ್ತು ಅಂಗನವಾಡಿ

ಕಾರ್ಯಕತರ್ೆಯರು ತಮ್ಮ ವ್ಯಾಪ್ತಿಯಲ್ಲಿ ನಡೆಯುವ ಬಾಲ್ಯ ವಿವಾಹದ ಮಾಹಿತಿಯನ್ನು ತಮಗೆ ಹಾಗೂ ಸಂಬಂಧಪಟ್ಟ ಮೇಲಾಕಾರಿಗಳಿಗೆ ತಪ್ಪದೇ ಸಲ್ಲಿಸಬೇಕು ಎಂದು ಹೇಳಿದರು.
ಹಳ್ಳಿಗಳಲ್ಲಿನ ಹೆಣ್ಣು ಮಕ್ಕಳಿಗೆ ಆರೋಗ್ಯದ ಬಗ್ಗೆ ಹೆಚ್ಚು ಅರಿವು ಇರುವುದಿಲ್ಲ. ಹೀಗಾಗಿ ಆಶಾ ಮತ್ತು ಅಂಗನವಾಡಿ ಕಾರ್ಯಕತರ್ೆಯರು ಅವರಿಗೆ ತಿಳಿ ಹೇಳಬೇಕು. ತಾಯಿ ಕಾಡರ್್ ನೋಂದಣಿ, ಪ್ರತಿ ತಿಂಗಳು ಆರೋಗ್ಯ ತಪಾಸಣೆ, ರಕ್ತಹೀನತೆ ಇದ್ದಲ್ಲಿ, ಪೋಶಕಾಂಶವಿರುವ ಆಹಾರ ಸೇವನೆ ಹೀಗೆ ಹೆಜ್ಜೆ,ಹೆಜ್ಜೆಗೆ ಅವರಿಗೆ ಮಾಹಿತಿ ಕೊಡಬೇಕು ಎಂದರು.