ಕೆ.ಆರ್.ಪೇಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ 28.50 ಕೋಟಿ ರೂ. ವೆಚ್ಚದಲ್ಲಿ 50 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ರೇಷ್ಮೆೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಶಂಕುಸ್ಥಾಪನೆ ನೆರವೇರಿಸಿದರು.
ಕೆ.ಆರ್.ಪೇಟೆಯಲ್ಲಿ ತಾಯಿ ಮತತ್ತು ಮಕ್ಕಳ ಆಸ್ಪತ್ರೆ ಅಗತ್ಯವಿತ್ತು. ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಪ್ರತಿವಷರ್ ಸುಮಾರು 500ಕ್ಕೂ ಹೆಚ್ಚು ಹೆರಿಗೆಗಳಾಗುತ್ತಿದ್ದರಿಂದ ಹಲವು ಬಾರಿ ಮಂಡ್ಯ, ಮೈಸೂರು, ಹಾಸನಕ್ಕೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಇದರಿಂದ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿರುವುದನ್ನು ಮನಗಂಡು ಉಪ ಚುನಾವಣೆ ಸಂದರ್ಭದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಿಸುವುದಾಗಿ ಭರವಸೆ ನೀಡಿದ್ದೆ. ಇದೀಗ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿರುವುದಾಗಿ ತಿಳಿಸಿದರು.