ಮೈಸೂರು: ತಾಯಿ ಸಾವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ಗುರುವಾರ ಜನತಾನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಜನತಾನಗರದ ನಿವಾಸಿ, ಪಿರಿಯಾಪಟ್ಟಣ ಮೂಲದ ದಿನೇಶ್(32) ಆತ್ಮಹತ್ಯೆ ಮಾಡಿಕೊಂಡವರು. ದಿನೇಶ್ ಮೈಸೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಕೆಲ ದಿನಗಳ ಹಿಂದೆ ತಾಯಿ ಮೃತಪಟ್ಟಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ದಿನೇಶ್, ಗುರವಾರ ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.