ಗುಂಡ್ಲುಪೇಟೆ: ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಶಕ್ತಿ ಯೋಜನೆ ಎರಡು ವರ್ಷ ಪೂರೈಸಿದ್ದು ಕೋಟ್ಯಂತರ ಮಹಿಳೆಯರು ಇದರ ಸದುಪಯೋಗ ಪಡೆದುಕೊಂಡಿದ್ದಾರೆ ಎಂದು ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ಹೇಳಿದರು.
ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯಾದ್ಯಂತ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಪಟ್ಟಣದ ಸಾರಿಗೆ ಬಸ್‌ಗಳಲ್ಲಿ 3.7 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಜತೆಗೆ 100 ಕೋಟಿ ರೂ. ಆದಾಯ ಪಡೆದುಕೊಂಡಿದೆ. ಮಹಿಳೆಯರು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಡಿಪೋ ವ್ಯವಸ್ಥಾಪಕ ತ್ಯಾಗರಾಜು, ಪುರಸಭೆ ಅಧ್ಯಕ್ಷ ಮಧುಸೂದನ್, ಉಪಾಧ್ಯಕ್ಷ ಅಣ್ಣಯ್ಯ ಸ್ವಾಮಿ, ಕಾಡಾ ಮಾಜಿ ಅಧ್ಯಕ್ಷ ನಂಜಪ್ಪ, ಚಾಮುಲ್ ಮಾಜಿ ಅಧ್ಯಕ್ಷ ನಂಜುಂಡ ಪ್ರಸಾದ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾಪತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್ ಇದ್ದರು.