ಕಟ್ಟೆಮಳಲವಾಡಿ: ಹುಣಸೂರು ತಾಲೂಕಿನ ಗಾವಡಗೆರೆ ಗ್ರಾಮದ ಎಸ್‌ಎನ್‌ಎಸ್ ಅನುದಾನಿತ ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಮುಳ್ಳೂರು ಗ್ರಾಮದ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ವಿವಿಧ ಪಂದ್ಯಾವಳಿಯಲ್ಲಿ ಬಹುಮಾನಗಳನ್ನು ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆ ಆಗಿದ್ದಾರೆ ಎಂದು ಶಾಲೆಯ ಮುಖ್ಯಶಿಕ್ಷಕ ಮೋಹನ್ ಕುಮಾರ್ ತಿಳಿಸಿದ್ದಾರೆ.
ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಿಯದರ್ಶಿನಿ ಮತ್ತು ಅವರ ತಂಡ ಪ್ರಥಮ ಸ್ಥಾನ ಗಳಿಸಿದ್ದು, ಇದುವರೆಗೆ ಶಾಲಾ ಮಕ್ಕಳು 17ನೇ ಬಾರಿ ಗೆಲುವು ಗಳಿಸಿರುವುದು ವಿಶೇಷ. ಬಾಲಕರ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ(15ನೇ ಬಾರಿ) ಗಳಿಸಿದ್ದು, ಬಾಲಕಿಯರ ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ, ಬಾಲಕರ ವಾಲಿಬಾಲ್ ಸ್ಪರ್ಧೆಯಲ್ಲೂ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಬಾಲಕರ ತಟ್ಟೆ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಬಾಲಕಿಯರ 200 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ವಿಜೇತ ವಿದ್ಯಾರ್ಥಿಗಳನ್ನು ದೈಹಿಕ ಶಿಕ್ಷಣ ಶಿಕ್ಷಕರ ಎಸ್.ರಮೇಶ್ ಸೇರಿದಂತೆ ಶಾಲಾ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ ಎಂದು ಮೋಹನ್‌ಕುಮಾರ್ ಹೇಳಿದ್ದಾರೆ.