ಕುಶಾಲನಗರ ಸಮೀಪದ ಕೂಡಿಗೆ ಕ್ರೀಡಾಶಾಲಾ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಕೆ.ಆರ್.ರತ್ನಕುಮಾರ್ ಚಾಲನೆ ನೀಡಿದರು. ಸುಕುಮಾರಿ, ಕುರುಂಬಯ್ಯ ಇತರರು ಇದ್ದರು. 
ಜಿಲ್ಲೆ

ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಕುಶಾಲನಗರ: ಸಮೀಪದ ಕೂಡಿಗೆ ಕ್ರೀಡಾಶಾಲೆ ಮೈದಾನದಲ್ಲಿ ಶನಿವಾರ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟ ನಡೆಯಿತು.

ಜಿಲ್ಲಾ ಪಂಚಾಯಿತಿ, ಸಾಕ್ಷರತಾ ಶಿಕ್ಷಣ ಇಲಾಖೆ, ತಾಲೂಕು ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ನೇರುಗಳಲೆ ಸರ್ಕಾರಿ ಪ್ರೌಢಶಾಲೆ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ವಿಭಾಗದ ಓಟ ಸ್ಪರ್ಧೆಗೆ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಆರ್.ರತ್ನಕುಮಾರ್ ಚಾಲನೆ ನೀಡಿದರು.

ಬಾಲಕ, ಬಾಲಕಿಯರಿಗೆ ಓಟ ಸ್ಪರ್ಧೆ, ಎತ್ತರ ಜಿಗಿತ, ಉದ್ದ ಜಿಗಿತ, ಬಾರದ ಗುಂಡು ಎಸೆತ, ಚಕ್ರ ಎಸೆತ, ರಿಲೆ, ತ್ರಿವಿಧ ಜಿಗಿತ, ಭರ್ಜಿ ಎಸೆತ ಸ್ಪರ್ಧೆಗಳು ನಡೆದವು.

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಸುಕುಮಾರಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕುರುಂಬಯ್ಯ, ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಎ.ಎಲ್.ಲಕ್ಷ್ಮಣ, ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕ ನಾಗೇಶ್, ಕೂಡಿಗೆ ಕ್ರೀಡಾಶಾಲಾ ಪ್ರಾಂಶುಪಾಲ ದೇವಕುಮಾರ್, ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ್, ದೊಡ್ಡಯ್ಯ, ಸುನೀಲ್, ಬೋಜೇಗೌಡ ಇದ್ದರು.