ಧಾರವಾಡ: ಜಿಲ್ಲೆಯ ವಿವಿಧ ತಾಲೂಕುಗಳ 2023-24ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.
ಹುಬ್ಬಳ್ಳಿ ತಾಲೂಕಿನಲ್ಲಿ ಸೆ. 16ರಂದು ಸುಳ್ಳ ಗ್ರಾಮದ ಶ್ರೀ ಶಿವಾನಂದ ಭಾರತಿ ಪ್ರೌಢಶಾಲೆ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಕುಂದಗೋಳ ತಾಲೂಕಿನಲ್ಲಿ ಸೆ. 17ರಂದು ಜೆಎಸ್‌ಎಸ್ ವಿದ್ಯಾಪೀಠ, ಅಳ್ನಾವರ ತಾಲೂಕಿನಲ್ಲಿ ಸೆ. 18ರಂದು ತಾಲೂಕು ಕ್ರೀಡಾಂಗಣದಲ್ಲಿ, ಕಲಘಟಗಿ ತಾಲೂಕಿನಲ್ಲಿ ಸೆ. 18ರಂದು ಗುಡ್‌ನ್ಯೂಸ್ ಕಾಲೇಜಿನಲ್ಲಿ ಹಾಗೂ ಅಣ್ಣಿಗೇರಿ ತಾಲೂಕಿನಲ್ಲಿ ಸೆ. 20ರಂದು ಡಿ.ಬಿ. ಶಿರೂರ ಸರ್ಕಾರಿ ಪ್ರೌಢಶಾಲೆಯಲ್ಲಿ ಬೆಳಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ. ಕ್ರೀಡಾಕೂಟದಲ್ಲಿ ಪುರುಷರು ಹಾಗೂ ಮಹಿಳೆಯರು ಭಾಗವಹಿಸಬಹುದು.
ಪುರುಷರ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ 100ಮೀ, 200ಮೀ, 400ಮೀ, 800ಮೀ, 1500ಮೀ, 5000ಮೀ, 10000 ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವೆಲಿನ್ ಎಸೆತ, 110ಮೀ ಹರ್ಡಲ್ಸ್, 4100 ಮೀ.ರಿಲೇ, 4400 ಮೀ. ರಿಲೇ ಹಾಗೂ ಗುಂಪು ಸ್ಪರ್ಧೆಗಳಲ್ಲಿ ವಾಲಿಬಾಲ್, ಕಬಡ್ಡಿ, ಖೋ-ಖೋ, ಫುಟ್‌ಬಾಲ್, ಯೋಗ ಆಯೋಜಿಸಲಾಗಿದೆ.
ಮಹಿಳೆಯರ ಅಥ್ಲೆಟಿಕ್ಸ್ ಸ್ಪರ್ಧೆಗಳು 100ಮೀ., 200ಮೀ, 400ಮೀ, 800ಮೀ, 1500ಮೀ. 3000 ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100ಮೀ ಹರ್ಡಲ್ಸ್, 4100 ಮೀ.ರಿಲೇ, 4400 ಮೀ.ರಿಲೇ ಹಾಗೂ ಗುಂಪು ಸ್ಪರ್ಧೆಗಳಲ್ಲಿ ವಾಲಿಬಾಲ್, ಕಬಡ್ಡಿ, ಖೋ-ಖೋ, ಥ್ರೋಬಾಲ್, ಯೋಗ ಆಯೋಜಿಸಲಾಗಿದೆ.
ವೈಯಕ್ತಿಕ ಕ್ರೀಡೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳನ್ನು ಜಿಲ್ಲಾ ಮಟ್ಟಕ್ಕೆ ನಿಯೋಜಿಸಲಾಗುವುದು ಆಸಕ್ತರು ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿ ಸಂರ್ಕಿಸಬಹುದು ಎಂದು ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ ಸರಶೆಟ್ಟಿ ತಿಳಿಸಿದ್ದಾರೆ.