ಜಿಲ್ಲೆ

ತೆಂಗಿನ ಸಸಿಗಳು ಮಾರಾಟ

ಮಂಜುನಾಥ ತಿಮ್ಮಯ್ಯ

ಮೈಸೂರು: ತಾಲೂಕಿನ ಹೆಬ್ಬಾಳ ತೋಟಗಾರಿಕೆ ಕ್ಷೇತ್ರದಲ್ಲಿ ತೆಂಗಿನ ಸಸಿಗಳು ಮಾರಾಟಕ್ಕೆ ಲಭ್ಯವಿದ್ದು, ಪ್ರತಿ ಗಿಡಕ್ಕೆ 75 ರೂ. ದರ ನಿಗದಿಪಡಿಸಲಾಗಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಜಾಬ್ ಕಾರ್ಡ್ ಹೊಂದಿರುವ ರೈತರಿಗೆ ಒಂದು ಎಕರೆಗೆ ತೋಟ ಪ್ರದೇಶ ಅಭಿವೃದ್ಧಿಪಡಿಸಲು ಕೂಲಿ ವೆಚ್ಚ 17,243 ರೂ. ನೀಡಲು ಅವಕಾಶವಿದ್ದು, ಆಸಕ್ತ ರೈತರು ಇದರ ಸದುಪಯೋಗ ಪಡಿಸಿಕೊಳ್ಳಬಹುದು.

ಮಾಹಿತಿಗಾಗಿ ಹೆಬ್ಬಾಳು ತೋಟಗಾರಿಕೆ ಸಹಾಯಕರ (8747085225), ಕಸಬಾ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಯ (9901387284), ವರುಣ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿ(8197392697), ಜಯಪುರ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಯ(9686766291), ಇಲವಾಲ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿ (8904673607) ಅನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.