ಜಿಲ್ಲೆ

ತೋಟಗಾರಿಕೆ ಇಲಾಖೆಯಿಂದ ಸಹಾಯಧ ಅರ್ಜಿ ಆಹ್ವಾನ

ಬೆಳಗಾವಿ: ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳಿಗೆ ಸಹಾಯಧನ 2023-24 ನೇ ಸಾಲಿನ ಕಾರ್ಯಕ್ರಮದಡಿ ಸೋಲಾರ್ ಪಂಪ್‌ಸೆಟ್ ಹಾಗೂ ವಿವಿಧ ಯಂತ್ರೋಪಕರಣಗಳನ್ನು ಖರೀದಿಸಲು ಸಾಮಾನ್ಯ ವರ್ಗದ ರೈತರಿಗೆ ಶೇ.40 ರಷ್ಟು ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಸಣ್ಣ, ಅತಿ ಸಣ್ಣ ಹಾಗೂ ಮಹಿಳಾ ಫಲಾನುಭವಿಗಳಿಗೆ ಶೇ. 50 ರಂತೆ ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
3 ಹೆಚ್‌ಪಿ ಸೋಲಾರ್ ಪಂಪ್‌ಸೆಟ್‌ಗಳಿಗೆ 1 ಲಕ್ಷ ಹಾಗೂ 5 ಹೆಚ್‌ಪಿ ಹಾಗೂ ಹೆಚ್ಚಿನ ಸಾಮರ್ಥ್ಯದ ಸೋಲಾರ್ ಪಂಪ್‌ಸೆಟ್‌ಗಳಿಗೆ 1.50 ಲಕ್ಷಗಳಿಗೆ ಸಹಾಯಧನ ನೀಡಲಾಗುತ್ತದೆ. ರೈತರು ತಮಗೆ ಅಗತ್ಯವೆನಿಸಿದ ಮತ್ತು ಇಚ್ಛೆಪಟ್ಟ ಇಲಾಖಾ ಅನುಮೋದಿತ ಸಂಸ್ಥೆಗಳಿಂದ ಸಂಬಂಧಪಟ್ಟ ತಾಲ್ಲೂಕಾ ತೋಟಗಾರಿಕೆ ಇಲಾಖೆಗೆ ಅರ್ಜಿ ಸಲ್ಲಿಸಿ ಕಾರ್ಯಾದೇಶ ಪಡೆದು ಖರೀದಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಅಥವಾ ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಬೆಳಗಾವಿ (ಜಿ.ಪಂ) ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.