ಜಿಲ್ಲೆ

ದ.ಕ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ

ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಪಂ. ಸಿಇಒ ಡಾ.ಸೆಲ್ವಮಣಿ ಆರ್. ಮೊದಲಾದವರು ಭಾಗವಹಿಸಿದ್ದರು.

ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು. ವಿವಿಧ ಕ್ಷೇತ್ರಗಳ ಸಾಧಕರಿಗೆ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ರಾಷ್ಟ್ರಧ್ವಜಾರೋಹಣ ಮಾಡಿ, ಪೆರೇಡ್ ವಂದನೆ ಸ್ವೀಕರಿಸಿದರು. ಬಳಿಕ ಗಣರಾಜ್ಯೋತ್ಸವ ಸಂದೇಶ ನೀಡಿದರು.

ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ಭಾನುವಾರ ದ.ಕ ಜಿಲ್ಲಾಡಳಿತ ವತಿಯಿಂದ 65ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಸರಳವಾಗಿ ನೆರವೇರಿತು.