ಧಾರವಾಡ: ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಇಲ್ಲಿನ ಸಾಧನಕೇರಿಯ ಬೇಂದ್ರೆ ಭವನದಲ್ಲಿ ಅ. 26ರಂದು ಸಂಜೆ 5.30ಕ್ಕೆ ವರಕವಿ ಡಾ.ದ.ರಾ.ಬೇಂದ್ರೆ ಅವರ 42ನೇ ಪುಣ್ಯಸ್ಮರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಬೆಂಗಳೂರಿನ ಎನ್‌ಎಂಕೆಆರ್‌ವಿ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಸಂಧ್ಯಾ ಹೆಗಡೆ ದೊಡ್ಡಹೊಂಡ ಅವರು ಡಾ.ದ.ರಾ.ಬೇಂದ್ರೆ ಮತ್ತು ಸೃಷ್ಟ್ಯಾತ್ಮಕತೆ ಕುರಿತು ಉಪನ್ಯಾಸ ನೀಡಲಿದ್ದಾರೆ. ನಂತರ ಪಂ.ಶ್ರೀಪಾದ ಹೆಗಡೆ ಭಾವಗೀತ ಗಾಯನ ಪ್ರಸ್ತುತ ಪಡಿಸಲಿದ್ದಾರೆ. ತಬಲಾದಲ್ಲಿ ಶ್ರೀಧರ ಮಾಂಡ್ರೆ ಹಾಗೂ ಹಾರ್ಮೋನಿಯಂದಲ್ಲಿ ಗುರುಪ್ರಸಾದ ಹೆಗಡೆ ಸಾಥ್ ನೀಡಲಿದ್ದಾರೆ. ಟ್ರಸ್ಟ್ ಅಧ್ಯಕ್ಷ ಡಾ.ಡಿ.ಎಂ.ಹಿರೇಮಠ, ಸದಸ್ಯರಾದ ಡಾ. ಕೆ.ಎಸ್.ಶರ್ಮಾ, ಡಾ.ಶ್ಯಾಮಸುಂದರ ಬಿದರಕುಂದಿ, ಡಾ.ಕೆ.ಆರ್.ದುರ್ಗಾದಾಸ್ ಹಾಗೂ ಡಾ. ಕೃಷ್ಣಾ ನಾಯಕ ಅವರು ಉಪಸ್ಥಿತರಿರುವರು ಎಂದು ಟ್ರಸ್ಟ್ ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ ತಿಳಿಸಿದ್ದಾರೆ.