ಚಿಕ್ಕಮಗಳೂರು ತಾಲೂಕಿನ ದತ್ತಪೀಠ ಮಾರ್ಗದಲ್ಲಿ ಭೂ ಕುಸಿತ ಸಂಭವಿಸಿದ್ದರಿAದ ರಸ್ತೆಗೆ ಬಿದ್ದ ಬಂಡೆಗಳನ್ನು ತೆರವುಗೊಳಿಸುತ್ತಿರುವ ಸಿಪಿಐ ಸಚಿನ್ ನೇತೃತ್ವದ ಅಧಿಕಾರಿಗಳ ತಂಡ. 
ಜಿಲ್ಲೆ

ದತ್ತಪೀಠ ರಸ್ತೆಯಲ್ಲಿ ಭೂ ಕುಸಿತ

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ದತ್ತಪೀಠಕ್ಕೆ ತೆರಳುವ ಮಾರ್ಗದಲ್ಲಿ ಭಾರಿ ಭೂ ಕುಸಿತ ಸಂಭವಿಸಿದ್ದು, ಈ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ಥಗೊಂಡಿದೆ. ಮುಳ್ಳಯ್ಯನಗಿರಿಗೆ ತೆರಳು ಮಾರ್ಗದ ತಿರುವಿನಿಂದ ದತ್ತಪೀಠಕ್ಕೆ ತೆರಳುವ ರಸ್ತೆ ಪಕ್ಕದಲ್ಲೇ ಭೂ ಕುಸಿತ ಸಂಭವಿಸಿದ್ದು, ದೊಡ್ಡ ದೊಡ್ಡ ಬಂಡೆಗಳು ರಸ್ತೆಗೆ ಬಂದು ಬಿದ್ದಿವೆ.

ಸೋಮವಾರ ತಡರಾತ್ರಿ ಭೂ ಕುಸಿತ ಸಂಭವಿಸಿದ್ದರಿAದಾಗಿ ಭಾರಿ ಅನಾಹುತ ತಪ್ಪಿದಂತಾಗಿದೆ. ಈ ಮಾರ್ಗದಲ್ಲಿ ಹಗಲಿನ ವೇಳೆ ಸಾವಿರಾರು ಪ್ರವಾಸಿಗರು ಸಂಚಾರ ನಡೆಸುತ್ತಾರೆ. ಈ ವೇಳೆಯೇ ಭೂ ಕುಸಿತ ಸಂಭವಿಸಿದ್ದಲ್ಲಿ ಭಾರಿ ಪ್ರಮಾಣದ ಅವಘಡ ಸಂಭವಿಸುವ ಸಾಧ್ಯತೆಯಿತ್ತು. ಬೃಹದಾಕಾರದ ಬಂಡೆಗಳು ರಸ್ತೆಯ ಮೇಲೆ ಬಿದ್ದಿದ್ದು, ಯಾವುದಾದರೂ ವಾಹನ ಈ ವೇಳೆ ಬಂದಿz್ದೆÃ ಆದಲ್ಲಿ ಭಾರಿ ದುರಂತ ನಡೆಯುತ್ತಿದ್ದರಲ್ಲಿ ಆಶ್ಚರ್ಯವೇ ಇಲ್ಲ.

ದತ್ತಪೀಠ ಮಾರ್ಗದಲ್ಲಿ ಭೂ ಕುಸಿತ ಸಂಭವಿಸಿದ ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಾಂತರ ಸಿಪಿಐ ಸಚಿನ್ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ತೆರಳಿ ರಸ್ತೆ ಮೇಲೆ ಬಿದ್ದಿ ಬೃಹದಾಕಾರದ ಬಂಡೆಗಳನ್ನು ತೆರವುಗೊಳಿಸಿದ್ದಾರೆ. ಅಲ್ಲದೆ ಇನ್ನೂ ದೊಡ್ಡ ಪ್ರಮಾಣದಲ್ಲಿ ಭೂ ಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ದತ್ತಪೀಠ ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಅಳವಡಿಕೆ ಮಾಡಿ ಪ್ರವಾಸಿಗರ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ಸ್ಥಳೀಯರು ಅನಿವಾರ್ಯವಾಗಿ ಇದೇ ಮಾರ್ಗದಲ್ಲಿ ಸಂಚರಿಸುವAತಾಗಿದೆ.

೧೬ ಬಾರಿ ಭೂ ಕುಸಿತ

ದತ್ತಪೀಠ ಮಾರ್ಗದಲ್ಲಿ ಈ ಬಾರಿ ಸುರಿದ ಧಾರಾಕಾರ ಮಳೆಯಿಂದಾಗಿ ಬರೋಬ್ಬರಿ ೧೫ ಬಾರಿ ಭೂ ಕುಸಿತ ಉಂಟಾಗಿತ್ತು. ಇದೀಗ ಗುರಿ ಪ್ರದೇಶದ ಆರಂಭದಲ್ಲೇ ದೊಡ್ಡ ಮಟ್ಟದಲ್ಲಿ ಭೂ ಕುಸಿತ ಸಂಭವಿಸುವ ಮೂಲಕ ಒಂದೇ ವರ್ಷದಲ್ಲಿ ದತ್ತಪೀಠ ಮಾರ್ಗದಲ್ಲಿ ೧೬ ಬಾರಿ ಭೂ ಕುಸಿತ ಸಂಭವಿಸಿದAತಾಗಿದೆ.

ಗಿರಿಶ್ರೇಣಿಯಲ್ಲಿ ನಿರಂತವಾಗಿ ಮಳೆ ಸುರಿಯುತ್ತಲೇ ಇದೆ. ವಾಡಿಕೆಗಿಂತಲೂ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿದೆ. ಜೊತೆಗೆ ಮುಂಗಾರು ಪೂರ್ವದಿಂದಲೂ ಧಾರಾಕಾರ ಮಳೆ ನಿರಂತರವಾಗಿ ಸುರಿಯುತ್ತಲೇ ಇರುವುದರಿಂದ ಭೂ ಕುಸಿತ ಪ್ರಕರಣಗಳು ಇನ್ನಷ್ಟು ಹೆಚ್ಚುವ ಆತಂಕ ಎದುರಾಗಿದೆ.