module:1facing:0; ?hw-remosaic: 0; ?touch: (-1.0, -1.0); ?modeInfo: ; ?sceneMode: Night; ?cct_value: 0; ?AI_Scene: (-1, -1); ?aec_lux: 0.0; ?hist255: 0.0; ?hist252~255: 0.0; ?hist0~15: 0.0; ?module:1facing:0; hw-remosaic: 0; touch: (-1.0, -1.0); modeInfo: ; sceneMode: Night; cct_value: 0; AI_Scene: (-1, -1); aec_lux: 0.0; hist255: 0.0; hist252~255: 0.0; hist0~15: 0.0; 
ಜಿಲ್ಲೆ

ದತ್ತಾ ವಾಸ್ಟರ್ ಸ್ಥಾಯಿ ಸಮಿತಿ ಅಧ್ಯಕ್ಷ

ಅಥಣಿ: ಪಟ್ಟಣದ ಪುರಸಭೆ ಸ್ಥಾಯಿ ಸಮಿತಿಗೆ ಅಧ್ಯಕ್ಷ ಸ್ಥಾನಕ್ಕೆ ದತ್ತಾ ವಾಸ್ಟರ್ ಒಬ್ಬರೆ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆಯಾದರು ಎಂದು ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳೆ ಘೋಷಿಸಿದರು.

ಇಲ್ಲಿನ ಪುರಸಭೆ ಸಭಾಂಗಣದಲ್ಲಿ ಸೋಮವಾರ ಜರುಗಿದ ವಿಶೇಷ ಸಾಮಾನ್ಯ ಸಭೆಯಲ್ಲಿ ಒಂದು ವರ್ಷದ ಅವಧಿಗೆ ಹಮ್ಮಿಕೊಂಡಿದ್ದ ಚುನಾವಣೆ ಪ್ರಕಿಯೆಯಲ್ಲಿ ಆಯ್ಕೆಯಾದರು.

ಪುರಸಭೆ ಸ್ಥಾಯಿ ಸಮಿತಿಗೆ ಸದಸ್ಯರಾಗಿ ರಾವಸಾಹೇಬ ಐಹೊಳೆ, ಸೈಯದ್‌ಅಮಿನ್ ಗದ್ಯಾಳ, ವಿಲಿನರಾಜ ಯಳಮಲ್ಲೆ, ಮಲ್ಲಿಕಾರ್ಜುನ ಬುಟಾಳೆ, ಉದಯಕುಮಾರ ಸೊಳಸಿ, ಮಲ್ಲೇಶ ಹುದ್ದಾರ, ಕಲ್ಲೇಶ ಮಡ್ಡಿ, ಸಂತೋಷ ಸಾವಡಕರ, ಬಸವರಾಜ ಪಾಟೀಲ, ವಿದ್ಯಾ ಹಳ್ಳದಮಳ ಅವಿರೋಧವಾಗಿ ಆಯ್ಕೆಯಾದರು. ಪುರಸಭೆ ಮುಖ್ಯಾಧಿಕಾರಿ ಅಶೋಕ ಗುಡಿಮನಿ, ಪುರಸಭೆ ಉಪಾಧ್ಯಕ್ಷೆ ಭುವನೇಶ್ವರಿ ಯಂಕಚ್ಚಿ ಇತರರಿದ್ದರು.