ಕಲಬುರಗಿ: ದಲಿತ ಜನ ಜಾಗೃತಿ ವೇದಿಕೆಯಿಂದ ನಗರದ ಜಗತ್ ವೃತ್ತದಲ್ಲಿ ಫೆ.೧೩ರಂದು ಮಧ್ಯಾಹ್ನ ೧೨.೩೦ಕ್ಕೆ ವೇದಿಕೆಯ ೯ನೇ ವರ್ಷದ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ವಿದ್ಯಾರ್ಥಿ ಒಕ್ಕೂಟದ ಶಿವರಾಜಕುಮಾರ ಜಾಪೂರ ತಿಳಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರ ಕ್ರಾಂತಿ ಗೀತೆ ಮೂಲಕ ಕಾರ್ಯಕ್ರಮ ಆರಂಭವಾಗಲಿದ್ದು, ಶ್ರೀ ಗುರುಬಸಯ್ಯ ಹಿರೇಮಠ ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ಅಲ್ಲಮಪ್ರಭು ಪಾಟೀಲ್ ಉದ್ಘಾಟಿಸಲಿದ್ದು, ಪಾಲಿಕೆ ಮಾಜಿ ಸದಸ್ಯ ರಾಜಕುಮಾರ ಕಪನೂರ ಅತಿಥಿಯಾಗಿರಲಿದ್ದಾರೆ. ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಮಾಜಿ ಸಚಿವ ರೇವು ನಾಯಕ ಬೆಳಮಗಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಿದ್ದಾರೆ. ವಿಠಲ್ ದೊಡ್ಡಮನಿ ಗೌರವ ಅಧ್ಯಕ್ಷತೆ ವಹಿಸಲಿದ್ದು, ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಾರ್ಷಿಕೋತ್ಸವ ನಿಮಿತ್ತ ಜಗತ್ ವೃತ್ತದಲ್ಲಿ ಅನ್ನಸಂತರ್ಪಣೆ ನಡೆಸಲಾಗುವುದು. ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು ಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.