ಚಿಕ್ಕಮಗಳೂರು ಎಡಿಸಿಗೆ ಮನವಿ ಸಲ್ಲಿಸಿದ ಡಿಎಸ್‌ಎಸ್ ಮುಖಂಡರು ದಲಿತರ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ತಡೆಯಲು ವಿಶೇಷ ಪೊಲೀಸ್ ಠಾಣೆ ತೆರೆಯುವಂತೆ ಒತ್ತಾಯಿಸಿದರು. ಮರ್ಲೆ ಅಣ್ಣಯ್ಯ, ಯು.ಸಿ.ರಮೇಶ್, ಮಂಜಯ್ಯ, ರಾಮಚಂದ್ರ, ಹರಿಯಪ್ಪ ಮತ್ತಿತರರಿದ್ದರು. 
ಜಿಲ್ಲೆ

ದಲಿತ ದೌರ್ಜನ್ಯ ಪ್ರಕರಣ ತಡೆಗಟ್ಟಲು ವಿಶೇಷ ಠಾಣೆಗೆ ಒತ್ತಾಯ

ಚಿಕ್ಕಮಗಳೂರು: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಹಾಗೂ ತ್ವರಿತ ನ್ಯಾಯಕ್ಕಾಗಿ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯಬೇಕು ಎಂದು ಒತ್ತಾಯಿಸಿ ಡಿಎಸ್‌ಎಸ್ ಮುಖಂಡರು ಜಿಲ್ಲಾಡಳಿತ ಮುಖಾಂತರ ಸಮಾಜ ಕಲ್ಯಾಣ ಸಚಿವರಿಗೆ ಗುರುವಾರ ಮನವಿ ಸಲ್ಲಿ ಸಿದರು.

ಈ ಸಂಬAಧ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಮೂಲಕ ಮನವಿ ಸಲ್ಲಿಸಿದ ಮುಖಂಡರು, ನಿರಂತರ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಕಡಿವಾಣ ಹಾಕುವ ದೃಷ್ಟಿಯಿಂದ ವಿಶೇಷ ಪೊಲೀಸ್ ಠಾಣೆ ತೆರೆಯಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಡಿಎಸ್‌ಎಸ್ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ, ಜಿಲ್ಲೆ ಅತಿಹೆಚ್ಚು ಮಲೆನಾಡು ಪ್ರದೇಶವಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ದಲಿತ ಕಾರ್ಮಿಕರು ವಾಸಿಸುತ್ತಿರುವ ಜೊತೆಗೆ ಅತಿಹೆಚ್ಚು ದೌರ್ಜನ್ಯ ಪ್ರಕರಣಗಳು ದಲಿತರ ಮೇಲೆ ನಡೆಯುತ್ತಿವೆ ಎಂದು ದೂರಿದರು.

ಈಗಾಗಲೇ ಸುಮಾರು ವರ್ಷಗಳಿಂದ ದಲಿತ ದೌರ್ಜನ್ಯ ಪ್ರಕರಣಗಳು ಇತ್ಯರ್ಥಗೊಂಡಿಲ್ಲ. ಆ ನಿಟ್ಟಿ ನಲ್ಲಿ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಠಾಣೆ ತೆರೆಯಬೇಕು. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ನಿಯಂತ್ರಣ, ತ್ವರಿತ ತನಿಖೆ ಹಾಗೂ ನ್ಯಾಯಕ್ಕಾಗಿ ವಿಶೇಷ ಠಾಣೆ ಅಗತ್ಯತೆ ಹೆಚ್ಚಿದೆ ಎಂದರು.

ಆ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಅವರು ಕೂಡಲೇ ದೌರ್ಜನ್ಯ ಪ್ರಕರಣ ಹೆಚ್ಚುತ್ತಿರುವ ಕಾರಣ ಸೂಕ್ತ ಆದೇಶ ಹೊರಡಿಸಿ ದಲಿತರಿಗೆ ಆಗುತ್ತಿರುವ ಸಂಕಷ್ಟವನ್ನು ತಡೆಗಟ್ಟಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಎಸ್ಸಿ, ಎಸ್ಟಿ ದೌರ್ಜನ್ಯ ಸಮಿತಿ ಸದಸ್ಯ ಯು.ಸಿ.ರಮೇಶ್, ಡಿಎಸ್‌ಎಸ್ ಸಂಘಟನಾ ಸಂಚಾಲಕ ಮಂಜಯ್ಯ, ತರೀಕೆರೆ ತಾಲೂಕು ಸಂಚಾಲಕ ರಾಮಚಂದ್ರ, ಮುಖಂಡರಾದ ಹರಿಯಪ್ಪ, ಮೌಂಟೂ, ರುದ್ರಯ್ಯ, ಚಂದ್ರಪ್ಪ, ಸೋಮಶೇಖರ್ ಮತ್ತಿತರರಿದ್ದರು.