ಕಲಬುರಗಿ: ಮಹರ್ಷಿ ವಾಲ್ಮೀಕಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿ, ದಲಿತರ ಹಣವನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದ್ದು, ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಹಾಗೂ ಸಂಬAಧಿಸಿದ ಸಚಿವರು ರಾಜೀನಾಮೆ ನೀಡಲು ಆಗ್ರಹಿಸಿ ಜಿಲ್ಲಾ ಬಿಜೆಪಿಯಿಂದ ನಗರದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಾನವ ಸರಪಳಿ ನಿರ್ಮಿಸಿ, ದಲಿತರ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಹಣವನ್ನು ಕಾಂಗ್ರೆಸ್ ಸರ್ಕಾರ ಅಕ್ರಮ ವರ್ಗಾವಣೆ ಮಾಡಿ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಾಲ್ಮೀಕಿ ನಿಗಮದ ಹಗರಣದಲ್ಲಿ ಸಚಿವ ನಾಗೇಂದ್ರ ಜತೆಗೆ ಹಲವರು ಶಾಮೀಲಾಗಿದ್ದಾರೆ. ಇದರಲ್ಲಿ ಭಾಗಿಯಾದ ಎಲ್ಲರ ತಲೆದಂಡವೂ ಆಗಬೇಕು. ಮೊದಲು ಸಿಎಂ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು.
ಶಾಸಕರಾದ ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ್, ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರz್ದÉÃವಾಡಗಿ, ಪ್ರಮುಖರಾದ ಅವ್ವಣ್ಣ ಮ್ಯಾಕೇರಿ, ಧರ್ಮಣ್ಣ ಇಟಗಿ, ಅಮರನಾಥ ಪಾಟೀಲ್, ಶಿವಯೋಗಿ ನಾಗನಳ್ಳಿ, ಉಮೇಶ ಪಾಟೀಲ್, ಮಹಾದೇವ ಬೆಳಮಗಿ, ಪ್ರವೀಣ ತೆಗನೂರ, ಶಿವ ಅಷ್ಠಗಿ, ರೇವಣಸಿದ್ದಪ್ಪ ಸಂಕಾಲಿ, ಗಂಗಪ್ಪಗೌಡ ಬೋಧನ್, ಜಗನ್ನಾಥ ಮಾಲಿಪಾಟೀಲ್, ಭಾಗಣ್ಣ ಹೋತಿನಮಡಿ ಇತರರಿದ್ದರು.