ಜಿಲ್ಲೆ

ದಾರಿದೀಪ ಚಾರಿಟಬಲ್ ಟ್ರಸ್ಟ್‌ನಿಂದ ಸೆ.11ರಂದು ಆರೋಗ್ಯ ಶಿಬಿರ

ಮೈಸೂರು: ನಗರಪಾಲಿಕೆ ಮಾಜಿ ಸದಸ್ಯ ಎಂ.ಪ್ರದೀಪ್‌ಕುಮಾರ್ ಅವರ ನೇತೃತ್ವದಲ್ಲಿ ಸೆ.11ರಂದು ದಾರಿದೀಪ ಚಾರಿಟಬಲ್ ಟ್ರಸ್ಟ್‌ನಿಂದ ಕೆ.ಆರ್.ಕ್ಷೇತ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಜೆ.ಪಿ.ನಗರದ ಪುಟ್ಟರಾಜು ಗವಾಯಿ ಕ್ರೀಡಾಂಗಣದಲ್ಲಿ ಅಂದು ಬೆಳಗ್ಗೆ 9ಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಾಜಿ ಸಂಸದ ಆರ್.ಧೃವನಾರಾಯಣ ಅವರು ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ. ಅತಿಥಿಗಳಾಗಿ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್,ವಾಸು, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಎಚ್.ಪಿ.ಮಂಜುನಾಥ್, ಅನಿಲ್‌ಚಿಕ್ಕಮಾದು, ಮುಖಂಡರಾದ ಸುನೀಲ್ ಬೋಸ್ ಸೇರಿದಂತೆ ವಿವಿಧ ಗಣ್ಯರು, ಮುಖಂಡರು ಭಾಗವಹಿಸಲಿದ್ದಾರೆ ಎಂದು ಪ್ರದೀಪ್‌ಕುಮಾರ್ ಅಭಿಮಾನಿ ಬಳಗದ ಹೇಳಿಕೆಯಲ್ಲಿ ತಿಳಿಸಲಾಗಿದೆ.