ಜಿಲ್ಲೆ

ದೀಕ್ಷಾಭೂಮಿ ಯಾತ್ರೆಗೆ ಚಾಲನೆ

ಬಳ್ಳಾರಿ : ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬೌದ್ಧಧರ್ಮದ ದೀಕ್ಷೆ ಪಡೆದ ಸ್ಥಳವಾದ ಮಹಾರಾಷ್ಟದ ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಅನುಯಾಯಿಗಳು ತೆರಳುವ ಬಸ್‌ಗಳಿಗೆ ಎಡಿಸಿ ಮಹಮ್ಮದ್ ಎನ್. ಝುಬೇರ್ ಚಾಲನೆ ನೀಡಿದರು.
ಬಳಿಕ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಮಾತನಾಡಿ, ಡಾ.ಅಂಬೇಡ್ಕರ್ ಅವರ ಅನುಯಾಯಿಗಳು ಪ್ರತಿ ವರ್ಷವೂ ಅಕ್ಟೋಬರ್ ತಿಂಗಳಿನಲ್ಲಿ ನಾಗಪುರದಲ್ಲಿ ನಡೆಯುವ ದಮ್ಮ ಪ್ರವರ್ತನಾ ದಿನ ಕಾರ್ಯಕ್ರಮಕ್ಕೆ ದೀಕ್ಷಾಯಾತ್ರೆ ಕೈಗೊಳ್ಳುವುದು ವಾಡಿಕೆಯಾಗಿದೆ. ಈ ವರ್ಷ ಜಿಲ್ಲೆಯ ವಿವಿಧ ತಾಲೂಕುಗಳಿಂದ 180 ಅನುಯಾಯಿಗಳನ್ನು ನಾಗಪುರ ದೀಕ್ಷಾಯಾತ್ರೆಗೆ ಕಳುಹಿಸುತ್ತಿರುವುದಾಗಿ ತಿಳಿಸಿದರು.
ಜಿಲ್ಲಾಡಳಿತ, ಜಿಪಂ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಅನುಯಾಯಿಗಳಿಗೆ ಅ. 10 ರಿಂದ 14 ರ ವರೆಗೆ ಮಹಾರಾಷ್ಟದ ನಾಗಪುರದ ದೀಕ್ಷಾ ಭೂಮಿ ಯಾತ್ರೆಗೆ ತೆರಳಲು ವ್ಯವಸ್ಥೆ ಮಾಡಲಾಗಿತ್ತು.