ಜಿಲ್ಲೆ

ದೀಪಾವಳಿ ಪ್ರಯುಕ್ತ ಪಟಾಕಿ ಮಾರಾಟದ ಪರವಾನಗಿಗೆ ಅರ್ಜಿ ಆಹ್ವಾನ

ಮೈಸೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿಗಳನ್ನು ಮಾರಾಟ ಮಾಡಲು ತಾತ್ಕಾಲಿಕ ಪರವಾನಗಿ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಜಿಲ್ಲಾಧಿಕಾರಿ ಕಚೇರಿ ಅಥವಾ ಸಂಬಂಧಿಸಿದ ತಾಲೂಕು ಕಚೇರಿಗಳಲ್ಲಿ ಪಡೆದು ಅ.18ರೊಳಗೆ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.