ಚಿತ್ರದುರ್ಗ: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರ 117ನೇ ಜನ್ಮ ದಿನವನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಚಾಲನೆ ನೀಡಿದರು. ಸಾಹಿತಿ ಪ್ರೊ.ಲಿಂಗಪ್ಪ ಉಪನ್ಯಾಸ ನೀಡಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಒ.ಪರಮೇಶ್ವರಪ್ಪ, ನಗರಸಭೆ ಮಾಜಿ ಅಧ್ಯಕ್ಷ ಎಚ್.ಸಿ.ನಿರಂಜನಮೂರ್ತಿ, ಸಾಮಾಜಿಕ ಮುಖಂಡರಾದ ಸಿ.ಕೆ.ಕುಮಾರ್, ಅನಂತ್ ಲಕ್ಷ್ಮೀಸಾಗರ, ಹುಲ್ಲೂರು ಕುಮಾರಸ್ವಾಮಿ, ಒ.ಮುರಾಜಿ ಇತರರಿದ್ದರು.